ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ವಾಪಸ್‌ ಬಂದ್ರೆ ಕೊಲ್ತೀವಿ: ಶೇಖ್ ಹಸೀನಾರನ್ನು ಎಚ್ಚರಿಸಿದ ಬಾಂಗ್ಲಾ ದೇಶದ ಮುಖ್ಯ ಅಭಿಯೋಜಕ2004ರಲ್ಲಿ ಸೋನಿಯಾ ಗಾಂಧಿ ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ?; ಸೋನಿಯಾ ಗಾಂಧಿ ಆತ್ಮಕಥನದಲ್ಲಿ ಮಹತ್ವದ ವಿಚಾರ ಬಹಿರಂಗಕರ್ನಾಟಕ ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ, ಅಲ್ಪಸಂಖ್ಯಾತರ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕ ಸಭೆ: ಡಿ.ಕೆ. ಶಿವಕುಮಾರ್ ಭರವಸೆಜಿಟಿ ದೇವೇಗೌಡ ಜೆಡಿಎಸ್‌ನಲ್ಲಿ ಮುಂದುವರಿಯೋದು ಡೌಟ್! ಬಿಜೆಪಿ, ಕಾಂಗ್ರೆಸ್ ಆಫರ್ ಗುಟ್ಟು ರಟ್ಟುಚುನಾವಣಾ ನೀತಿ ಸಂಹಿತೆ: ಮರುನೇಮಕಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳಿಗೂ ರಾಜಕೀಯ ಚಟುವಟಿಕೆ ನಿಷೇಧ; ಚುನಾವಣಾ ಆಯೋಗದ ಸೂಚನೆಕರ್ನಾಟಕದ 64 ಕ್ಷೇತ್ರಗಳಲ್ಲಿ 8.80 ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರು ಅಳಿಸಲಾಗಿದೆ: ಮುಸ್ಲಿಂ ಒಕ್ಕೂಟ ಆರೋಪಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೇಜಸ್ವಿ ಸೂರ್ಯ ತಿರುಗೇಟು; ಮೂರು ದಿನಗಳಲ್ಲಿ ಸಾಕ್ಷ್ಯ ನೀಡುವಂತೆ ಸವಾಲುಭಾವಪುಂಜ – 3 : ಅಡುಗೆಮನೆ ಅಂದು ಇಂದುಬೆಂಗಳೂರು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ವಿಜಯನಗರ ನಿಲ್ದಾಣದಲ್ಲಿ ಹಳಿಗೆ ಹಾರಿದ ಪ್ರಯಾಣಿಕನಾಟಕಕ್ಕೂ ಬೇಕಾ ಪೋಲೀಸ್ ಕಣ್ಗಾವಲು?ರಾಮಾಯಣ ಮತ್ತು ಕರುನಾಡಿನ ಭೌಗೋಳಿಕ ನಂಟುಕಲಬುರಗಿ ಸಮೀಪ ಶರಣರ ವಚನ ಪರಂಪರೆಗೆ ಹೊಸ ಸ್ಪರ್ಶ; ವಚನ ಮಂಟಪ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆರಾಜ್ಯ ಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ: 35 ತಹಶೀಲ್ದಾರ್‌ಗಳಿಗೆ ಹೊಸ ಜವಾಬ್ದಾರಿಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಶಿರಾಡಿಘಾಟ್ ಕಂದಕದಲ್ಲಿ – ಬೆಚ್ಚಿ ಬೀಳಿಸುವ ಸಂಗತಿE20 ಪೆಟ್ರೋಲ್ ವಿವಾದಕ್ಕೆ ಮತ್ತೊಂದು ತಿರುವು: 20% ಎಥನಾಲ್ ಎಂದ BPCL ಪೋಸ್ಟ್‌ನಲ್ಲಿ ಕಂಡಿದ್ದು 33%; ತಕ್ಷಣವೇ ಟ್ವಿಟ್ ಡಿಲೀಟ್ಟರ್ಕಿಯ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 16 ಕಾರ್ಮಿಕರು ಸಾವು, ಹಲವರಿಗೆ ಗಾಯಐಫೋನ್ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ದುರಂತ; ವಿಷಕಾರಿ ಅನಿಲ ಸೇವಿಸಿ ಮೂವರು ಕಾರ್ಮಿಕರು ಸಾವು!ಹಾಸನ DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ – ತನಿಖೆಗೆ HDK ಒತ್ತಾಯದೀಪಾವಳಿ ಪಟಾಕಿ ಹಾವಳಿ; ದೆಹಲಿ ವಾಯುಮಾಲಿನ್ಯದ ನಂತರ ಬೆಂಗಳೂರಿನ ಗಾಳಿ ಕಲುಷಿತ!ಮಾಲಿನ್ಯದಲ್ಲಿ ಶೇ.25ರಷ್ಟು ಏರಿಕೆLPG ಕೆ.ಜಿಗೆ 11 ರೂ ಹೆಚ್ಚಳ ಆಟೋ ಚಾಲಕರಿಗೆ – ಗಾಯದ ಮೇಲೆ ಬರೆ

ಕಡ್ಡಾಯ ಎರಡು ಮಕ್ಕಳು ಸಾಕು ಎನ್ನುವ ನಿಯಮಕ್ಕೆ ಇದು ಸರಿಯಾದ ಕಾಲವಲ್ಲ: ಸುಪ್ರೀಂ ಕೋರ್ಟ್

PPeepal Media

Peepal Media ದೇಶ

• 2 ನಿಮಿಷದ ಓದು

ಕಡ್ಡಾಯ ಎರಡು ಮಕ್ಕಳು ಸಾಕು ಎನ್ನುವ ನಿಯಮಕ್ಕೆ ಇದು ಸರಿಯಾದ ಕಾಲವಲ್ಲ: ಸುಪ್ರೀಂ ಕೋರ್ಟ್

ದೆಹಲಿ: ಇಬ್ಬರಿಗಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಡೆಯುವ ಕಾನೂನುಗಳ ಅಗತ್ಯದ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಎತ್ತಿದೆ. ದೇಶದಲ್ಲಿ ಮಕ್ಕಳ ಜನನ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಇಂತಹ ಕಾನೂನುಗಳು ಈಗ ತಮ್ಮ ಪ್ರಸ್ತುತತೆಯನ್ನು ಕಳೆದುಕೊಂಡಿವೆ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ. ಈ ಸಂಬಂಧ 2003ರಲ್ಲಿ ನೀಡಿದ್ದ ತೀರ್ಪನ್ನು ಮರುಪರಿಶೀಲನೆಗಾಗಿ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಇಬ್ಬರಿಗಿಂತ ಹೆಚ್ಚು ಮಕ್ಕಳಿರುವ ವ್ಯಕ್ತಿಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸುವ ಕಾನೂನುಗಳ ಮುಂದುವರಿಕೆಯನ್ನು ನ್ಯಾಯಾಲಯ ಬುಧವಾರ ಪ್ರಶ್ನಿಸಿತು. ದೇಶದ ಒಟ್ಟು ಫಲವತ್ತತೆ ಪ್ರಮಾಣ (ಟಿಎಫ್‌ಆರ್‌) 2003ರಲ್ಲಿ 3ರಷ್ಟಿತ್ತು. ಈಗ ಅದು 1.9ಕ್ಕೆ ಇಳಿದಿದೆ. ಈ ಬದಲಾವಣೆಯ ಹಿನ್ನೆಲೆಯಲ್ಲಿ ಇಂತಹ ನಿರ್ಬಂಧಗಳ ಹಿಂದಿನ ಕಾರಣಗಳನ್ನು ಮತ್ತೆ ಪರಿಶೀಲಿಸಬೇಕಿದೆ ಎಂದು ನ್ಯಾಯಪೀಠ ಹೇಳಿದೆ.

2003ರಲ್ಲಿ ಜಾವೇದ್ ಮತ್ತು ಹರಿಯಾಣ ರಾಜ್ಯ ಸರ್ಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಬ್ಬರು ಮಕ್ಕಳ ನಿಯಮವನ್ನು ಎತ್ತಿಹಿಡಿದಿತ್ತು. ಆದರೆ, ಈಗಿನ ಜನಸಂಖ್ಯೆಯ ಸ್ಥಿತಿಯನ್ನು ಗಮನಿಸಿದರೆ ಆ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅಭಿಪ್ರಾಯಪಟ್ಟರು.

‘ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದುವುದಕ್ಕೆ ಶಿಕ್ಷೆ ವಿಧಿಸುವ ಇಂತಹ ಕಾನೂನುಗಳು ತಮ್ಮ ಪ್ರಸ್ತುತತೆಯನ್ನು ಕಳೆದುಕೊಂಡಿವೆ ಎಂಬುದು ನಮ್ಮ ಗಟ್ಟಿಯಾದ ಅಭಿಪ್ರಾಯ’ ಎಂದು ನ್ಯಾಯಪೀಠ ಹೇಳಿದೆ.

ಅಧಿಕ ಜನಸಂಖ್ಯೆಯ ಭಯವೇ ಇಂತಹ ಕಾನೂನುಗಳಿಗೆ ಮುಖ್ಯ ಆಧಾರವಾಗಿತ್ತು. ಆದರೆ, ಕಳೆದ ಕೆಲವು ದಶಕಗಳಲ್ಲಿ ದೇಶದ ಜನಸಂಖ್ಯೆಯ ಸ್ವರೂಪದಲ್ಲಿ ಹಲವು ಬದಲಾವಣೆಗಳಾಗಿವೆ. ಫಲವತ್ತತೆ ಪ್ರಮಾಣವೂ ಗಣನೀಯವಾಗಿ ಇಳಿದಿದೆ. ಈ ಬದಲಾವಣೆಗಳನ್ನು ಗಮನಿಸದಿದ್ದರೆ ದೇಶ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ನ್ಯಾಯಮೂರ್ತಿ ನರಸಿಂಹ ಹೇಳಿದರು.

ಮಹಾರಾಷ್ಟ್ರದ ಕಾಕೋಡ್ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಂಗಳ ಭೀಮರಾವ್ ಅವರಿಗೆ ಮೂರನೇ ಮಗು ಜನಿಸಿದ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಗ್ರಾಮ ಪಂಚಾಯಿತಿ ಕಾಯ್ದೆ-1969ರ ಸೆಕ್ಷನ್ 14(1)(ಜೆ-1) ಅಡಿಯಲ್ಲಿ ವಿಧಿಸಲಾಗಿದ್ದ ಅನರ್ಹತೆಯನ್ನು ನ್ಯಾಯಪೀಠ ರದ್ದುಗೊಳಿಸಿದೆ.

ಇಬ್ಬರಿಗಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಸಂಸ್ಥೆಗಳ ಹುದ್ದೆಗಳನ್ನು ಅಲಂಕರಿಸಬಾರದು ಎಂಬ ನಿರ್ಬಂಧವನ್ನು 2000ರ ಸೆಪ್ಟೆಂಬರ್ 13ರಂದು ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜಾರಿಗೆ ತರಲಾಗಿತ್ತು. ಈಗ ಈ ನಿಯಮದ ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯದ ಬಗ್ಗೆ ವಿಸ್ತೃತ ಪೀಠ ಪರಿಶೀಲಿಸಲಿದೆ.

ಮೀಸಲು ಕ್ಷೇತ್ರಗಳ ಬದಲಾವಣೆ ಸಂಸತ್ತಿನ ವ್ಯಾಪ್ತಿ: ಸುಪ್ರೀಂ ಕೋರ್ಟ್

ಇದೇ ವೇಳೆ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲು ಕ್ಷೇತ್ರಗಳನ್ನು ನಿರ್ದಿಷ್ಟ ಅವಧಿಗೊಮ್ಮೆ ಬದಲಾಯಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ಜಗದೀಶ್ ಸಿಂಗ್ ಈ ಅರ್ಜಿ ಸಲ್ಲಿಸಿದ್ದರು. ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತೆ ಲೋಕಸಭೆ ಮತ್ತು ವಿಧಾನಸಭೆಗಳ ಮೀಸಲು ಕ್ಷೇತ್ರಗಳಿಗೂ ಆವರ್ತನ ಪದ್ಧತಿ ಜಾರಿಗೆ ತರಬೇಕು ಎಂಬುದು ಅವರ ಮನವಿಯಾಗಿತ್ತು.

ಪ್ರಸ್ತುತ ಮೀಸಲು ಕ್ಷೇತ್ರಗಳ ವ್ಯವಸ್ಥೆಯು ಸಂವಿಧಾನದ 14, 15 ಮತ್ತು 19ನೇ ವಿಧಿಗಳು ನೀಡಿರುವ ಹಕ್ಕುಗಳಿಗೆ ವಿರುದ್ಧವಾಗಿದೆ. ಇದು ಮತದಾರರಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅವಕಾಶವನ್ನು ಸೀಮಿತಗೊಳಿಸುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ಆದರೆ, ಈ ವಿಷಯ ಸಂಸತ್ತಿನ ವ್ಯಾಪ್ತಿಗೆ ಸೇರಿದ್ದು, ನ್ಯಾಯಾಲಯಗಳು ಈ ಬಗ್ಗೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

‘ನೀವು ತಪ್ಪು ಸಂಖ್ಯೆಗೆ ಕರೆ ಮಾಡುತ್ತಿದ್ದೀರಿ. ಈಗ ಪ್ರತಿಭಟನೆ ಮತ್ತು ಘೋಷಣೆಗಳ ಕಾಲ. ನೀವೂ ಆ ಮಾರ್ಗವನ್ನು ಅನುಸರಿಸಬಹುದು’ ಎಂದು ನ್ಯಾಯಪೀಠ ಹಾಸ್ಯಭರಿತವಾಗಿ ಹೇಳಿತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು