ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕ್ಷೇತ್ರ ಮರುವಿಂಗಡಣೆ ಕುರಿತು ಕೇಂದ್ರ ವಿರುದ್ಧದ ಸಭೆಗೆ ಆಹ್ವಾನಿಸಿದ ತಮಿಳು ಸಿಎಂ: ಬ್ಯುಜಿ ಎಂದ ಸಿದ್ದರಾಮಯ್ಯ

PPeepal Media

Peepal Media ದೇಶ

• 2 ನಿಮಿಷದ ಓದು

ಕ್ಷೇತ್ರ ಮರುವಿಂಗಡಣೆ ಕುರಿತು ಕೇಂದ್ರ ವಿರುದ್ಧದ ಸಭೆಗೆ ಆಹ್ವಾನಿಸಿದ ತಮಿಳು ಸಿಎಂ: ಬ್ಯುಜಿ ಎಂದ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ವಿರೋಧಿಸಲು ರಾಜ್ಯಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿ (ಜೆಎಸಿ) ರಚಿಸುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಅವತ್ತು ಮುಂಚೆಯೇ ಒಪ್ಪಿಕೊಂಡ ಕಾರ್ಯಕ್ರಮಗಳ ಕಾರಣಕ್ಕಾಗಿ ಸಬೆಗೆ ಬರಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ವಿರುದ್ಧವಾಗಿ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯುವ ಮೊದಲ ಸಭೆಗೆ ಆಗಮಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂಪುಟದ ಸಚಿವರು ಇಂದು ಬೆಂಗಳೂರಿಗೆ ಆಗಮಿಸಿ ಆಹ್ವಾನ ನೀಡಿದರು.  

ಸ್ಟಾಲಿನ್ ಸಂಪುಟದ ಸಚಿವರಾದ ಕೆ.ಪೊನ್ನುಮುಡಿ ಹಾಗೂ ರಾಜ್ಯಸಭಾ ಸದಸ್ಯ ಎಂ.ಎಂ.ಅಬ್ದುಲ್ಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಸ್ಟಾಲಿನ್ ಅವರ ಪತ್ರವನ್ನು ನೀಡಿದರು. ಈ ವೇಳೆ ಖುದ್ದು ಸ್ಟಾಲಿನ್ ಅವರೂ ದೂರವಾಣಿ ಮೂಲಕ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು, ಸಭೆಗೆ ಆಹ್ವಾನ ನೀಡಿದರು ಎಂದು ತಿಳಿದುಬಂದಿದೆ.

ಸ್ಟಾಲಿನ್ ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭಾ ಕ್ಷೇತ್ರ ಮರು ವಿಂಗಡಣೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ನಡೆಗಳನ್ನು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಹೋರಾಟಕ್ಕೂ ಬೆಂಬಲ ನೀಡುತ್ತೇವೆಂದು ಭರವಸೆ ನೀಡಿದ್ದಾರೆ.

ಸ್ಟಾಲಿನ್ ಅವರ ಅಹ್ವಾನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಇಂದು ನನ್ನನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು. ಸಚಿವರ ನಿಯೋಗದ ಭೇಟಿಗೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಹೋರಾಟದ ಬಗ್ಗೆ ಚರ್ಚಿಸಿದೆ.

ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ನನ್ನ ಬೆಂಬಲ ಸದಾ ಇರಲಿದೆ. ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ತಮಿಳುನಾಡಿನಂತೆ ಕರ್ನಾಟಕ ಕೂಡ ಸಮಾನ ಅಭಿಪ್ರಾಯ ಹೊಂದಿದೆ ಎಂದು ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆ ಮಾನದಂಡಗಳು ರಾಷ್ಟ್ರೀಯ ಕರ್ತವ್ಯಗಳನ್ನು ಪೂರೈಸಿದ ರಾಜ್ಯಗಳಿಗೆ ಶಿಕ್ಷೆ ಹಾಕುವ ನಿಟ್ಟಿನಲ್ಲಿದೆ. ಜನಸಂಖ್ಯೆ ನಿಯಂತ್ರಣ ಮಾಡಿರುವ ರಾಜ್ಯಗಳಿಗೆ ಇದರಿಂದ ದೊಡ್ಡ ಅನ್ಯಾಯ ಆಗಲಿದೆ. ಹೀಗಿದ್ದರೂ ರಾಜ್ಯಗಳ ಕಳವಳಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಸ್ಪಷ್ಟತೆ ಅಥವಾ ಯಾವುದೇ ನಿರ್ದಿಷ್ಟ ಬದ್ದತೆಯನ್ನು ಪ್ರದರ್ಶಿಸುತ್ತಿಲ್ಲ.

ಹೀಗಾಗಿ ಜಂಟಿ ಕ್ರಿಯಾ ಸಮಿತಿ ರೂಪಿಸಿದ್ದು, (ಜೆಎಸಿ) ಕೇಂದ್ರದ ಧೋರಣೆಯಿಂದ ಅನ್ಯಾಯಕ್ಕೆ ತುತ್ತಾಗುವ ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ, ಪೂರ್ವ ಭಾರತದಿಂದ ಪಶ್ಚಿಮ ಬಂಗಾಳ, ಒಡಿಶಾ, ಉತ್ತರದಿಂದ ಪಂಜಾಬ್ ರಾಜ್ಯಗಳು ಸೇರಿ ನಿಮ್ಮ ಪಕ್ಷದಿಂದ ಒಬ್ಬ ಹಿರಿಯ ಪ್ರತಿನಿಧಿಯನ್ನು ಜೆಎಸಿಗೆ ನೇಮಿಸಿ ನಮ್ಮ ಒಗ್ಗಟ್ಟಿಗೆ ಸಹಕಾರ ನೀಡಬೇಕು.

ಅಲ್ಲದೆ, ಚೆನ್ನೈನಲ್ಲಿ ಮಾ.22 ರಂದು ಮೊದಲ ಸಭೆ ನಡೆಯಲಿದೆ. ಈ ವೇಳೆ ಭಾಗವಹಿಸಿ ಜನರ ಭವಿಷ್ಯವನ್ನು ಕಾಪಾಡಲು ಒಗ್ಗಟ್ಟಾಗಿ ನಿಲ್ಲೋಣ  ಸ್ಟಾಲಿನ್ ಮೇಲೆ ಹೆಸರಿಸಲಾದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

 ಸಿದ್ದರಾಮಯ್ಯ ನಡೆಗೆ ವಿರೋಧ

 ಪೂರ್ವನಿಯOಜಿತ ಕಾರ್ಯಗಲ ನಿಮಿತ್ತ ಈ ಸಭೆಯಲ್ಲಿ ತಾವು ಭಾಗವಹಿಸಲು ಆಗುವುದಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ಸಿದ್ದರಾಮಯ್ಯ ಪತ್ರ ಮೂಲಕ ತಮ್ಮನ್ನು ಭೇಟಿಯಾದ ನಿಯೋಗಕ್ಕೆ ತಿಳಿಸಿದ್ದಾರೆ. ಆ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಂಡಿದ್ದು, ಸಿದ್ದರಾಮಯ್ಯನವರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧವ್ಯಕ್ತವಾಗುತ್ತಿದೆ. 

ಲೇಖಕ ನಾಗೆಗೌಡ ಕಿಲಾರ್‌ ಸಿದ್ದರಾಮಯ್ಯ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಹಾಕಿದ್ದು,  ಸ್ಟಾಲಿನ್ ರವರು ಕರೆದಿರುವ ಮೀಟಿಂಗ್ ಗಿಂತ ನಿಮಗೆ ಬೇರೆ ಯಾವ ಮೀಟಿಂಗ್ ಮುಖ್ಯ ಎಂದು ತಿಳಿಸಿ ಸಿದ್ದರಾಮಯ್ಯನವರೇ. ನಾವು ರಾಜ್ಯದ ಜನ ತಿಳಿಯ ಬಯಸುತ್ತೇವೆ.

ನೀವು ಇದುವರೆಗೂ ಯಾವುದೇ ಜಿಎಸ್ಟಿ ಕೌನ್ಸಿಲ್ ಮೀಟಿಂಗ್ ಅಟೆಂಡ್ ಮಾಡಿಲ್ಲ, ಲೋಕಸಬಾ ಕ್ಶೇತ್ರಗಳ ಮರು ವಿಂಗಡಣೆ ವಿಚಾರವಾಗಿ ಸರ್ವ ಪಕ್ಷಗಳ ಸಬೆ  ಸಹ ಕರೆದಿಲ್ಲ, ಆರ್ಥಿಕ ಆಯೋಗದಿಂದ ಆಗುತ್ತಿರುವ ತೆರಿಗೆ ಹಂಚಿಕೆ ಅನ್ಯಾಯದ ಬಗ್ಗೆ ಸಣ್ಣ ಮಟ್ಟದ ರಾಜಕೀಯ ಹೋರಾಟವನ್ನು ನೀವು ಪ್ರಾರಂಬಿಸಿಲ್ಲ. ದ್ವಿ ಬಾಶಾ ನೀತಿ ರಾಜ್ಯಕ್ಕೆ ಬೇಕೆ ಬೇಕು ಅಂತ ಡಿಮ್ಯಾಂಡ್ ಸಹ  ಮಾಡುತ್ತಿಲ್ಲ ಎಂದು ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು