ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೈಂಗಿಕ ದೌರ್ಜನ್ಯ ಪ್ರಕರಣ: ಬಾಂಬೆ ಹೈಕೋರ್ಟ್ ಶಿಕ್ಷೆ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತರುಣ್ ತೇಜ್‌ಪಾಲ್

PPeepal Media

Peepal Media ದೇಶ

• 1 ನಿಮಿಷದ ಓದು

ಲೈಂಗಿಕ ದೌರ್ಜನ್ಯ ಪ್ರಕರಣ: ಬಾಂಬೆ ಹೈಕೋರ್ಟ್ ಶಿಕ್ಷೆ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತರುಣ್ ತೇಜ್‌ಪಾಲ್

ದೆಹಲಿ: 2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ತಮಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತೆಹಲ್ಕಾ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ವಕೀಲ ಆದಿತ್ಯ ಸಮದ್ದಾರ್ ಅವರ ಮೂಲಕ ತೇಜ್‌ಪಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಆಗಸ್ಟ್ 6 ರಂದು ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆ ನೀಡುವಂತೆ ಕೋರಿದ್ದಾರೆ. ಇದಕ್ಕೂ ಮುನ್ನ, ಅಪರಾಧದ ಗಂಭೀರತೆಯನ್ನು ಪರಿಗಣಿಸಿ 10 ವರ್ಷಗಳ ಶಿಕ್ಷೆ ಕಡಿಮೆಯಾಗಿದ್ದು, ತೇಜ್‌ಪಾಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಕೋರಿ ಗೋವಾ ಸರ್ಕಾರವೂ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಪ್ರಕರಣದ ಹಿನ್ನೆಲೆ:

2013ರ ನವೆಂಬರ್‌ನಲ್ಲಿ ಗೋವಾದ ಪಂಚತಾರಾ ಹೋಟೆಲ್‌ನಲ್ಲಿ ‘ತೆಹಲ್ಕಾ’ ಪತ್ರಿಕೆ ಆಯೋಜಿಸಿದ್ದ ‘ಥಿಂಕ್ ಫೆಸ್ಟ್’ ಕಾರ್ಯಕ್ರಮದ ವೇಳೆ, ಹೋಟೆಲ್‌ನ ಲಿಫ್ಟ್‌ನಲ್ಲಿ ಕಿರಿಯ ಮಹಿಳಾ ಸಹೋದ್ಯೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ತೇಜ್‌ಪಾಲ್ ಅವರ ಮೇಲಿತ್ತು. 2013ರ ನವೆಂಬರ್ 30 ರಂದು ಬಂಧನಕ್ಕೊಳಗಾಗಿದ್ದ ತೇಜ್‌ಪಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಅತ್ಯಾಚಾರ, ಲೈಂಗಿಕ ಕಿರುಕುಳ ಸೇರಿದಂತೆ ಹಲವು ಗಂಭೀರ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು.

2021ರ ಮೇ ತಿಂಗಳಲ್ಲಿ ಗೋವಾದ ಸೆಷನ್ಸ್ ನ್ಯಾಯಾಲಯವು ಪ್ರಾಸಿಕ್ಯೂಷನ್ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ತೇಜ್‌ಪಾಲ್ ಅವರನ್ನು ದೋಷಮುಕ್ತಗೊಳಿಸಿತ್ತು.

ಆದರೆ ಸೆಷನ್ಸ್ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ, ತೇಜ್‌ಪಾಲ್ ದೋಷಿ ಎಂದು ತೀರ್ಪು ನೀಡಿ ಆಗಸ್ಟ್ 6 ರಂದು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಈ ತೀರ್ಪನ್ನು ಪ್ರಶ್ನಿಸಿ ತೇಜ್‌ಪಾಲ್ ದೇಶದ ಅತ್ಯುನ್ನತ ನ್ಯಾಯಾಲಯದ ಮೊರೆ ಹೋಗಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು