ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಲಿತ ನಾಯಕ ಭೇಟಿ ನೀಡಿದ್ದಕ್ಕೆ ದೇವಾಲಯ ಶುದ್ಧೀಕರಣ ಪ್ರಕರಣ l ಬಿಜೆಪಿಯದ್ದು ದಲಿತ ವಿರೋಧಿ ಮನಸ್ಥಿತಿ: ರಾಹುಲ್ ಗಾಂಧಿ

PPeepal Media

Peepal Media ದೇಶ

• 1 ನಿಮಿಷದ ಓದು

ದಲಿತ ನಾಯಕ ಭೇಟಿ ನೀಡಿದ್ದಕ್ಕೆ ದೇವಾಲಯ ಶುದ್ಧೀಕರಣ ಪ್ರಕರಣ l ಬಿಜೆಪಿಯದ್ದು ದಲಿತ ವಿರೋಧಿ ಮನಸ್ಥಿತಿ: ರಾಹುಲ್ ಗಾಂಧಿ

ಅಹಮದಾಬಾದ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿನ ರಾಮ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದಲಿತ ಕಾಂಗ್ರೆಸ್ ನಾಯಕ ಟೀಕಾರಾಮ್ ಜುಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಆ ಮಂದಿರವನ್ನು ಶುದ್ಧೀಕರಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿವ್ರ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿಯದ್ದು ದಲಿತ ವಿರೋಧಿ ಮನಸ್ಥಿತಿ” ಎಂದು ಅವರು ಹರಿಹಾಯ್ದಿದ್ದಾರೆ.

ದೇಶವು ಸಂವಿಧಾನ ಹಾಗೂ ಅದರ ಸಿದ್ಧಾಂತಗಳ ಆಧಾರದಲ್ಲಿ ನಡೆಯಲಿದೆಯೆ ಹೊರತು ಬಹುಜನರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಪರಿಗಣಿಸುವ ಮನುಸ್ಮೃತಿಯನ್ನು ಆಧರಿಸಿಯಲ್ಲ ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಹಾಗೂ ಮನುಸ್ಮೃತಿ ಚಿಂತನೆಗೆ ಮತ್ತೊಂದು ನಿದರ್ಶನ! ಬಿಜೆಪಿಯು ನಿರಂತರವಾಗಿ ದಲಿತರನ್ನು ಅವಮಾನಿಸುತ್ತಾ, ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಹೀಗಾಗಿಯೇ ಸಂವಿಧಾನವನ್ನು ಗೌರವಿಸುವುದು ಮಾತ್ರವಲ್ಲ; ರಕ್ಷಿಸುವುದೂ ಮುಖ್ಯವಾಗಿದೆ. ಮೋದಿಯವರೆ, ದೇಶವು ಸಂವಿಧಾನ ಹಾಗೂ ಅದರ ಸಿದ್ಧಾಂತಗಳ ಮೇಲೆ ನಡೆಯಲಿದೆಯೆ ಹೊರತು, ಬಹುಜನರನ್ನು ಎರಡನೆ ದರ್ಜೆಯ ಪ್ರಜೆಗಳನ್ನಾಗಿ ಪರಿಗಣಿಸುವ ಮನುಸ್ಮೃತಿಯನ್ನು ಆಧರಿಸಿಯಲ್ಲ” ಎಂದು ಅವರು ಟೀಕಾಪ್ರಹಾರ ನಡೆಸಿದ್ದಾರೆ.

ಇದಕ್ಕೂ ಮುನ್ನ, ಮಂಗಳವಾರದಂದು ಬಿಜೆಪಿ ದಲಿತ ವಿರೋಧಿಯಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ರಾಜಸ್ಥಾನ ವಿಧಾನಸಭೆಯ ವಿಪಕ್ಷ ನಾಯಕ ಟೀಕಾರಾಮ್ ಜುಲ್ಲಿ ಅವರು ಅಲ್ವಾರ್ ನಲ್ಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ, ಮಂದಿರದಲ್ಲಿ ಗಂಗಾ ಜಲ ಪ್ರೋಕ್ಷಿಸಿದ್ದ ಬಿಜೆಪಿ ನಾಯಕ ಜ್ಞಾನ್ ದೇವ್ ಅಹುಜಾರ ನಡವಳಿಕೆಯ ಕುರಿತು ಬಿಜೆಪಿಯ ಉನ್ನತ ನಾಯಕತ್ವವು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿತ್ತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು