ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಯನಾಡಿನಲ್ಲಿ ಭೀಕರ ಅಪಘಾತ… ಒಂಬತ್ತು ಮಂದಿ ಸಾವು

P

Peepal Media • ದೇಶ

• 1 ನಿಮಿಷದ ಓದು

ವಯನಾಡಿನಲ್ಲಿ ಭೀಕರ ಅಪಘಾತ… ಒಂಬತ್ತು ಮಂದಿ ಸಾವು

ಕೇರಳ ರಾಜ್ಯದ ವಯನಾಡಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ 25 ಮೀಟರ್ ಆಳದ ಕಮರಿಗೆ ಬಿದ್ದಿದೆ. ಈ ಅಪಘಾತದಲ್ಲಿ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ತೋಟದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ತಲಪ್ಪುಜಾದ ಕನ್ನಾಟ್ ಹಿಲ್‌ನಲ್ಲಿ ಅಪಘಾತಕ್ಕೀಡಾಗಿದೆ. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಮೃತರೆಲ್ಲರೂ ವಯನಾಡು ಮೂಲದವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಎನ್ನುವುದಾಗಿ ವರದಿಯಾಗಿದೆ. ಅಪಘಾತದ ವೇಳೆ ಜೀಪಿನಲ್ಲಿ ಚಾಲಕ ಸೇರಿ ಒಟ್ಟು 13 ಮಂದಿ ಇದ್ದರು. ಗಾಯಾಳುಗಳನ್ನು ವಯನಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆಯನ್ನು ಜಿಲ್ಲಾ ವೈದ್ಯಾಧಿಕಾರಿ ದೃಢಪಡಿಸಿದ್ದಾರೆ. ಅಪಘಾತದಲ್ಲಿ ಜೀಪು ನಜ್ಜುಗುಜ್ಜಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ಈ ದುರಂತದ ಬಗ್ಗೆ ಸಿಎಂ ಪಿಣರಾಯಿ ವಿಜಯನ್ ಆಘಾತ ವ್ಯಕ್ತಪಡಿಸಿ ಅರಣ್ಯ ಸಚಿವ ಎ.ಕೆ.ಶಶೀಂದ್ರನ್‌ಗೆ ಸ್ಥಳಕ್ಕೆ ತೆರಳುವಂತೆ ಆದೇಶಿಸಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂಒ ತಿಳಿಸಿದ್ದಾರೆ. ಮತ್ತೊಂದೆಡೆ, ಈ ಘಟನೆಗೆ ವಯನಾಡ್ ಸಂಸದ ರಾಹುಲ್ ಗಾಂಧಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದೊಂದಿಗೆ ಮಾತನಾಡಿ ಶೀಘ್ರ ಸ್ಪಂದಿಸುವಂತೆ ಕೋರಲಾಗಿದೆ ಎಂದರು. ಮೃತರ ಕುಟುಂಬಗಳಿಗೆ ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಹುಲ್, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version