ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಲೇಜುಗಳಲ್ಲಿನ ಹಿಜಾಬ್‌ ಮೇಲಿನ ನಿಷೇಧಕ್ಕೆ ತಡೆ ನೀಡಿದ ಸುಪ್ರೀಂ: ಬಟ್ಟೆ ಅವರಿಷ್ಟ ಎಂದ ಕೋರ್ಟ್

PPeepal Media

Peepal Media • ದೇಶ

• 1 ನಿಮಿಷದ ಓದು

ಕಾಲೇಜುಗಳಲ್ಲಿನ ಹಿಜಾಬ್‌ ಮೇಲಿನ ನಿಷೇಧಕ್ಕೆ ತಡೆ ನೀಡಿದ ಸುಪ್ರೀಂ: ಬಟ್ಟೆ ಅವರಿಷ್ಟ ಎಂದ ಕೋರ್ಟ್

ಕಾಲೇಜು ಆವರಣದಲ್ಲಿ ಹಿಜಾಬ್, ಬುರ್ಖಾ ಮತ್ತು ನಿಖಾಬ್ ಧರಿಸದಂತೆ ಚೆಂಬೂರ್ ಕಾಲೇಜು ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಕುರಿತು ಮಧ್ಯಂತರ ಆದೇಶ ನೀಡಿದೆ. ಕಾಲೇಜಿನ ಆದೇಶಗಳನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ಪೀಠ ಕಾಲೇಜು ವಿಧಿಸಿರುವ ಷರತ್ತುಗಳ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದೆ. ಇಂತಹ ನಿಯಮಗಳನ್ನು ಹೇರುವುದು ಸರಿಯಲ್ಲವೆಂದು ಪೀಠ ಅಭಿಪ್ರಾಯಪಟ್ಟಿದೆ.

ವಿದ್ಯಾರ್ಥಿಗಳ ತಮ್ಮ ಧರ್ಮವನ್ನು ಬಹಿರಂಗಪಡಿಸಬಾರದು ಎನ್ನುವ ಕಾಲೇಜಿನ ಆದೇಶದ ಕುರಿತು ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಶ್ನೆಗಳನ್ನು ಎತ್ತಿದರು. ವಿದ್ಯಾರ್ಥಿಗಳ ಹೆಸರುಗಳು ಧರ್ಮವನ್ನು ಬಹಿರಂಗಪಡಿಸುವುದಿಲ್ಲವೇ? ಅವರನ್ನು ಸಂಖ್ಯೆಗಳ ಮೂಲಕ ಗುರುತಿಸಿಕೊಳ್ಳಲು ಹೇಳುವಿರಾ ಎಂದು ಅವರು ಪ್ರಶ್ನಿಸಿದ್ದಾರೆ. ಕಾಲೇಜಿನ ಪರ ಹಿರಿಯ ವಕೀಲರಾದ ಮಾಧವಿ ದಿವಾನ್ ವಾದ ಆಲಿಸಿ, ಇದು ಖಾಸಗಿ ಸಂಸ್ಥೆಯಾಗಿದ್ದು, ಕಾಲೇಜು ಯಾವಾಗಿನಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಶ್ನಿಸಿದರು. 2008 ರಿಂದ ಕಾಲೇಜು ಅಸ್ತಿತ್ವದಲ್ಲಿದೆ ಎಂದು ಹೇಳಿದಾಗ.. ಇಷ್ಟು ವರ್ಷ ಏಕೆ ಸೂಚನೆ ನೀಡಲಿಲ್ಲ..? ಧರ್ಮವು ಇದ್ದಕ್ಕಿದ್ದಂತೆ ಗುರುತಿಸಲ್ಪಡತೊಡಗಿದೆಯೇ? ಧರ್ಮವನ್ನು ಬಹಿರಂಗಪಡಿಸುವಂತೆ ವಿದ್ಯಾರ್ಥಿಗಳು ಬರಬಾರದು ಎನ್ನುವ ನೀವು ನಾಳೆ ತಿಲಕ ಧರಿಸಿದವರನ್ನೂ ಸಹ ಬಿಡುವುದಿಲ್ಲವೇ? ಎಂದು ವಕೀಲರನ್ನು ಪ್ರಶ್ನಿಸಿದರು.

441 ಮುಸ್ಲಿಂ ವಿದ್ಯಾರ್ಥಿಗಳು ನಿಷೇಧದ ಕುರಿತು ಆಕ್ಷೇಪವಿಲ್ಲದೆ ಸಂತೋಷದಿಂದ ಕಾಲೇಜಿಗೆ ಹಾಜರಾಗುತ್ತಿದ್ದಾರೆ ಎಂದು ಅವರು ಹೇಳಿದರು. ಆದರೆ, ವಿದ್ಯಾರ್ಥಿಗಳು ತಮಗೆ ಇಷ್ಟವಾದ ಬಟ್ಟೆ ಧರಿಸಲು ಅವಕಾಶ ನೀಡಬೇಕು ಎಂದು ಕೋರ್ಟ್ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಮುಂಬೈ ಎಜುಕೇಶನ್ ಸೊಸೈಟಿಗೆ ಸೂಚಿಸಿದೆ. ಈ ಸಂಬಂಧ ಕಾಲೇಜಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ವಿಚಾರಣೆಯನ್ನು ನವೆಂಬರ್‌ಗೆ ಮುಂದೂಡಲಾಗಿದೆ. ತಡೆಯಾಜ್ಞೆಯನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಪೀಠ ಸ್ಪಷ್ಟಪಡಿಸಿದೆ. ಆದೇಶದಲ್ಲಿ ಮಾರ್ಪಾಡುಗಳನ್ನು ಪಡೆಯಲು ಕಾಲೇಜು ಅಧಿಕಾರಿಗಳಿಗೆ ಅವಕಾಶ ನೀಡಿತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು