ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಳಮೀಸಲಾತಿ ಜಾರಿಗೆ ಕಾಂಗ್ರೆಸ್‌ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ

PPeepal Media

Peepal Media • ದೇಶ

• 1 ನಿಮಿಷದ ಓದು

ಒಳಮೀಸಲಾತಿ ಜಾರಿಗೆ ಕಾಂಗ್ರೆಸ್‌ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ. ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷವೇ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಅವರ ಅಧ್ಯಕ್ಷತೆಯ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು.

ಈಗಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು