ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಬೇಲೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ – 2 ದಿನಗಳಲ್ಲಿ ಇಬ್ಬರ ದುರ್ಮರಣಬೇಲೂರು 56 ಕಾಡಾನೆಗಳನ್ನು ತಿಂಗಳೊಳಗೆ ಸ್ಥಳಾಂತರ – ಸಚಿವ ಕೆ. ಎಂ. ಶಿವಲಿಂಗೇಗೌಡ ಭರವಸೆಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಅವಕಾಶ: ಬಿಜೆಪಿ ನಾಯಕರ ಮನವೊಲಿಕೆಗೆ ಕುಮಾರಸ್ವಾಮಿ ಯತ್ನಬೆಂಗಳೂರಿನಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತಲೋಕ ಸುತ್ತಾಟ : ಪ್ರಕೃತಿ ವಿಸ್ಮಯದ ಪ್ರವಾಸಿ ತಾಣ : ವಿಯೆಟ್ನಾಂ ಬಾ ನಾ ಹಿಲ್ಸ್‌“ಇದು ಯಾರಪ್ಪನ ಭಾರತವಲ್ಲ” – ಹಾಡುಗಳಲ್ಲಿ ರಾಹತ್ ಇಂದೂರಿ ಸಾಲುಗಳ ನಿರ್ಬಂಧಕ್ಕೆ ಸ್ಥಳೀಯ ಆಡಳಿತಕ್ಕೆ ದಿಲ್ಜಿತ್ ದೋಸಾಂಜ್ ತಿರುಗೇಟು!ಫುಕೆಟ್‌ನಲ್ಲಿ ಭೀಕರ ಅಗ್ನಿ ದುರಂತ: 11 ಮಂದಿ ಸಾವು, 16 ಜನರಿಗೆ ಗಾಯಕಸ್ತೂರಿರಂಗನ್ ವರದಿ: ಅರಣ್ಯ ಗಡಿ ಗೊಂದಲಕ್ಕೆ ಶಾಶ್ವತ ಪರಿಹಾರ, ಒಂದು ವರ್ಷದೊಳಗೆ ಜಂಟಿ ಭೌತಿಕ ಸಮೀಕ್ಷೆ : ಸಚಿವ ರಾಮಲಿಂಗಾರೆಡ್ಡಿಡಿಸೆಂಬರ್ ಮೊದಲ ವಾರದಲ್ಲಿ ಚಳಿಗಾಲದ ಅಧಿವೇಶನ: ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆಗೆ ಕೇಂದ್ರದ ಸಿದ್ಧತೆಐಸಿಸಿ ಅಧ್ಯಕ್ಷರಾಗಿ ಅಮಿತ್ ಷಾ ಪುತ್ರ ಜಯ್ ಶಾ ಎರಡನೇ ಅವಧಿಗೆ ಅವಿರೋಧ ಆಯ್ಕೆಎನ್‌ವಿಡಿಯಾದಲ್ಲಿ ನಾಯಕತ್ವದ ಪಲ್ಲಟಕ್ಕೆ ಸಿದ್ಧತೆ; ಜೆನ್ಸನ್ ಹುವಾಂಗ್ ಮರುಪ್ರವೇಶಕ್ಕೆ ಮಸ್ಕ್ ಬೆಂಬಲಅಡಿಕೆ, ತೆಂಗಿನ ತೋಟಗಳ ರಕ್ಷಣೆಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆಹಿರಿಯೂರು ಉಪಚುನಾವಣೆ ಕಣಕ್ಕೆ ಪೂರ್ಣಿಮಾ ಶ್ರೀನಿವಾಸ್ ಆಸಕ್ತಿ; ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಕೆನವೆಂಬರ್ 16ರ ಸಹಿಷ್ಣುತೆ ದಿನ ಆಚರಿಸುವ ನೈತಿಕ ಅರ್ಹತೆ ಜಗತ್ತಿಗಿದೆಯೇ?ಬಹ್ರೇನ್‌ನ ಅಮೆರಿಕ ಸೇನಾ ನೆಲೆಗೆ ಇರಾನ್‌ನಿಂದ ಡ್ರೋನ್ ದಾಳಿ ಯತ್ನಬ್ರಿಟನ್ ಪೌರತ್ವ ಪಡೆದ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ; 2010ರಿಂದ ಭಾರತದಿಂದ ಹೊರಗೆ ವಾಸ, ದೇಶ ತೊರೆದವರ ಪಟ್ಟಿಗೆ ಮತ್ತೊಂದು ಸೇರ್ಪಡೆಪಶ್ಚಿಮ ಬಂಗಾಳ: ಪೊಲೀಸರ ಗುಂಡಿನ ದಾಳಿಗೆ ಆರೋಪಿ ಸಾವು; ಆರು ತಿಂಗಳಲ್ಲಿ ಐದನೇ ಎನ್‌ಕೌಂಟರ್ಉತ್ತರ ಪ್ರದೇಶ: ಡಿಜೆ ಸದ್ದಿಗೆ 20 ದಿನದ ಮಗು ಸಾವು; ಕುಟುಂಬದ ದೂರಿನ ಮೇರೆಗೆ ಡಿಜೆ ಉಪಕರಣ ವಶಕ್ಕೆಅಧಿಕಾರ ಸಿಗದ ಸಿಗದ ಹತಾಶೆಯಲ್ಲಿ ಕಾಂಗ್ರೆಸ್‌ ತನ್ನ ಕಾರ್ಯಕ್ರಮಗಳಿಗೆ ವಿದೇಶಿ ಎಡಪಂಥೀಯರನ್ನು ಆಹ್ವಾನಿಸುತ್ತಿದೆ: ಅಮಿತ್‌ ಶಾ ಆರೋಪದೆಹಲಿ ವಾಯುಮಾಲಿನ್ಯ: ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಚೇರಿಗೆ ತೆರಳಲು ಎಐಎಸ್ಎ ಅಧ್ಯಕ್ಷೆ ನೇಹಾ ಬೋರಾ ನಿರ್ಧಾರ

“ಇದು ಯಾರಪ್ಪನ ಭಾರತವಲ್ಲ” – ಹಾಡುಗಳಲ್ಲಿ ರಾಹತ್ ಇಂದೂರಿ ಸಾಲುಗಳ ನಿರ್ಬಂಧಕ್ಕೆ ಸ್ಥಳೀಯ ಆಡಳಿತಕ್ಕೆ ದಿಲ್ಜಿತ್ ದೋಸಾಂಜ್ ತಿರುಗೇಟು!

PPeepal Media Desk

Peepal Media Desk ದೇಶ

• 1 ನಿಮಿಷದ ಓದು

“ಇದು ಯಾರಪ್ಪನ ಭಾರತವಲ್ಲ” – ಹಾಡುಗಳಲ್ಲಿ ರಾಹತ್ ಇಂದೂರಿ ಸಾಲುಗಳ ನಿರ್ಬಂಧಕ್ಕೆ ಸ್ಥಳೀಯ ಆಡಳಿತಕ್ಕೆ ದಿಲ್ಜಿತ್ ದೋಸಾಂಜ್ ತಿರುಗೇಟು!

ಇಂದೋರ್: ಸಂಗೀತ ಕಾರ್ಯಕ್ರಮದಲ್ಲಿ ಹಾಡುಗಳ ಆಯ್ಕೆಗೆ ವಿಧಿಸಲಾಗಿದ್ದ ನಿರ್ಬಂಧದ ನಡುವೆಯೇ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಉರ್ದು ಕವಿ ರಾಹತ್ ಇಂದೂರಿ ಅವರ ದೇಶಪ್ರೇಮದ ಆಶಯ ಸಾರುವ ಗಝಲ್ ಸಾಲುಗಳನ್ನು ವೇದಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ನವೆಂಬರ್ 15ರಂದು ನಡೆದ ‘ಆರಾ ಇಂಡಿಯಾ ಟೂರ್’ ಸಂಗೀತ ಕಾರ್ಯಕ್ರಮದಲ್ಲಿ ಈ ಪ್ರಸಂಗ ನಡೆದಿದೆ. ಕಾರ್ಯಕ್ರಮಕ್ಕೂ ಮುನ್ನ ಸ್ಥಳೀಯ ಆಡಳಿತವು ಮದ್ಯ ಮತ್ತು ಶಸ್ತ್ರಾಸ್ತ್ರಗಳನ್ನು ವೈಭವೀಕರಿಸುವ ಅಂಶಗಳಿರುವ ನಾಲ್ಕು ಹಾಡುಗಳನ್ನು ಪ್ರದರ್ಶಿಸದಂತೆ ಆಯೋಜಕರಿಗೆ ಸೂಚನೆ ನೀಡಿತ್ತು. ಮಕ್ಕಳ ಹಾಗೂ ಯುವಜನರ ಮೇಲೆ ಇಂತಹ ಹಾಡುಗಳು ನಕಾರಾತ್ಮಕ ಪರಿಣಾಮ ಬೀರಬಹುದು ಎಂಬ ಕಾರಣವನ್ನು ಅಧಿಕಾರಿಗಳು ಮುಂದಿಟ್ಟಿದ್ದರು.

ಕಾರ್ಯಕ್ರಮದ ವೇಳೆ ಈ ನಿರ್ಬಂಧಗಳ ಬಗ್ಗೆ ಪ್ರಸ್ತಾಪಿಸಿದ ದಿಲ್ಜಿತ್, ಹಾಡುಗಳ ಆಯ್ಕೆಯ ಮೇಲೆ ಒಂದರ ಹಿಂದೆ ಒಂದರಂತೆ ನಿರ್ಬಂಧ ವಿಧಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಇಂದೋರ್ ಮಹಾಕಾಳನ ನೆಲವಾಗಿದ್ದು, ಇಲ್ಲಿಗೆ ಬರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಮಾತನಾಡಿದರು. ಹಲವು ಅಡೆತಡೆಗಳ ನಡುವೆಯೂ ಅಭಿಮಾನಿಗಳಿಗೆ ನೀಡಿದ್ದ ಮಾತಿನಂತೆ ಕಾರ್ಯಕ್ರಮ ನಡೆಸಿಕೊಟ್ಟಿರುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ದಿವಂಗತ ಕವಿ ರಾಹತ್ ಇಂದೂರಿ ಅವರ ಪ್ರಸಿದ್ಧ ಗಝಲ್‌ನ ಕೆಲವು ಸಾಲುಗಳನ್ನು ಉಲ್ಲೇಖಿಸಿದರು. ಅದರಲ್ಲೂ ‘ಸಬೀ ಕಾ ಖೂನ್ ಹೈ ಶಾಮಿಲ್ ಯಹಾಂ ಕಿ ಮಿಟ್ಟಿ ಮೇ, ಕಿಸಿ ಕೆ ಬಾಪ್ ಕಾ ಹಿಂದೂಸ್ತಾನ್ ಥೋಡಿ ಹೈ’ ಎಂಬ ಸಾಲುಗಳು ವಿಶೇಷ ಗಮನ ಸೆಳೆದವು. ದೇಶದ ಮಣ್ಣಿನಲ್ಲಿ ಎಲ್ಲ ಸಮುದಾಯಗಳ ಜನರ ಕೊಡುಗೆಯೂ ಇದೆ, ಭಾರತ ಯಾರೊಬ್ಬರ ವೈಯಕ್ತಿಕ ಸ್ವತ್ತಲ್ಲ ಎಂಬ ಆಶಯ ಸಾರುವ ಈ ಸಾಲುಗಳನ್ನು ಕೇಳಿದ ಪ್ರೇಕ್ಷಕರು ಉತ್ಸಾಹದಿಂದ ಪ್ರತಿಕ್ರಿಯಿಸಿದರು.

ಇದೀಗ ದಿಲ್ಜಿತ್ ಅವರ ಈ ಹೇಳಿಕೆ ಮತ್ತು ಗಝಲ್ ವಾಚನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಲಾವಿದರ ಅಭಿವ್ಯಕ್ತಿ ಸ್ವಾತಂತ್ರ್ಯ, ಹಾಡುಗಳ ಮೇಲಿನ ನಿರ್ಬಂಧ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಕ್ಕಳ ಹಿತಾಸಕ್ತಿ ಕಾಪಾಡುವ ವಿಚಾರಗಳ ಕುರಿತು ಚರ್ಚೆ ಆರಂಭವಾಗಿದೆ.

ಇನ್ನೊಂದೆಡೆ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ದಿಲ್ಜಿತ್ ಅವರ ಮುಂದಿನ ಸಂಗೀತ ಕಾರ್ಯಕ್ರಮಕ್ಕೂ ಇದೇ ರೀತಿಯ ನಿರ್ಬಂಧಗಳನ್ನು ವಿಧಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಇಂದೋರ್ ಕಾರ್ಯಕ್ರಮದ ಮೂಲಕ ಸಂಗೀತದ ಜೊತೆಗೆ ಸಾಮಾಜಿಕ ಸಂದೇಶವನ್ನೂ ಮುಂದಿಟ್ಟಿರುವ ದಿಲ್ಜಿತ್ ದೋಸಾಂಜ್ ಅವರ ನಡೆ ಇದೀಗ ಮುಂದಿನ ಕಾರ್ಯಕ್ರಮಗಳ ಮೇಲಿನ ನಿರ್ಬಂಧಗಳ ವಿಚಾರಕ್ಕೂ ಹೊಸ ಆಯಾಮ ನೀಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು