ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಸ್ಟೀಸ್‌ ಚಂದ್ರಚೂಡ್‌ ಅವರನ್ನು ಇತಿಹಾಸ ನೆನಪಿಟ್ಟುಕೊಳ್ಳದಿರುವುದೇ ಒಳ್ಳೆಯದು – ದುಷ್ಯಂತ್‌ ದವೆ

PPeepal Media

Peepal Media • ದೇಶ

• 1 ನಿಮಿಷದ ಓದು

ಜಸ್ಟೀಸ್‌ ಚಂದ್ರಚೂಡ್‌ ಅವರನ್ನು ಇತಿಹಾಸ ನೆನಪಿಟ್ಟುಕೊಳ್ಳದಿರುವುದೇ ಒಳ್ಳೆಯದು – ದುಷ್ಯಂತ್‌ ದವೆ

ದೆಹಲಿ: ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್‌ ಅವರು “ನನಗೆ ಮುಂದಿನ ಇತಿಹಾಸ ನನ್ನನ್ನು ಹೇಗೆ ನೆನಪಿಸಿಕೊಳ್ಳಬಹುದು, ಮುಂದಿನ ನ್ಯಾಯಾಧೀಶರಿಗೆ ಎಂತಹ ಪರಂಪರೆಯನ್ನು ನಾನು ಬಿಟ್ಟು ಹೋಗಲಿದ್ದೇನೆ” ಎನ್ನುವ ಪ್ರಶ್ನೆ ನನ್ನನ್ನು ಕಾಡುತ್ತಿದೆ ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ನ್ಯಾಯವಾದಿ ದುಷ್ಯಂತ್‌ ದವೆಯವರು “ಜಸ್ಟೀಸ್‌ ಚಂದ್ರಚೂಡ್‌ ಅವರನ್ನು ಇತಿಹಾಸ ನೆನಪಿಟ್ಟುಕೊಳ್ಳದೆ, ಮರೆತುಬಿಡುವುದೇ ಒಳ್ಳೆಯದು” ಎಂದು ಹೇಳಿದ್ದಾರೆ.

ದಿ ವೈರ್‌ ವೆಬ್‌ಸೈಟಿನ ಪರವಾಗಿ ಕರಣ್‌ ಥಾಪರ್‌ ನಡೆಸಿಕೊಟ್ಟ ಸಂಸದರ್ಶನದಲ್ಲಿ ಮಾತನಾಡುತ್ತಿದ್ದ ಅವರು ಮೇಲಿನ ಮಾತುಗಳನ್ನು ಹೇಳಿದ್ದಾರೆ. ಸಂದರ್ಶನದ ನಡುವೆ ಥಾಪರ್‌ ಜಸ್ಟೀಸ್‌ ಚಂದ್ರಚೂಡ್‌ ಅವರ ಕುರಿತು ಕೇಳಿದ ಪ್ರಶ್ನೆಗೆ ದುಷ್ಯಂತ್‌ ದವೆ ಹೀಗೆ ಉತ್ತರಿಸಿದ್ದಾರೆ.

ಮುಂದುವರೆದು ಮಾತನಾಡಿದ ದುಷ್ಯಂತ್‌ ದವೆ, “ಚಂದ್ರಚೂಡ್‌ ನನಗೂ ಒಳ್ಳೆಯ ಸ್ನೇಹಿತ ಹಾಗೂ ಸಹೋದ್ಯೋಗಿ. ಅವರ ಕೆಲಸಗಳ ಕುರಿತು ನನಗೆ ಹೆಮ್ಮೆಯಿದೆ. ಆದರೆ ಅವರು ಮುಖ್ಯ ನ್ಯಾಯಾಧೀಶರಾದ ನಂತರ ನಡೆದುಕೊಂಡು ರೀತಿ ಸರಿಯಿಲ್ಲ.

ಕೆಲವು ಪ್ರಕರಣಗಳಲ್ಲಿ ಅವರು ಧೈರ್ಯ ತೋರಿಸುವಲ್ಲಿ ಅವರು ಹಿಂಜರಿದಿದ್ದಾರೆ, ಕೆಲವು ತೀರ್ಪುಗಳು ಕಳವಳ ಹುಟ್ಟಿಸುವಂತಿವೆ.

ಅವರು ಇತಿಹಾಸ ನೆನಪಿಟ್ಟುಕೊಳ್ಳುವಂತಹದ್ದು ಏನೂ ಮಾಡಿಲ್ಲ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಮರೆತುಬಿಡುವುದೇ ಒಳ್ಳೆಯದು” ಎಂದು ಅವರು ಹೇಳಿದ್ದಾರೆ.

ಇದೇ ತಿಂಗಳ ಒಂಬತ್ತನೇ ತಾರೀಖಿನಂದು ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್‌ ಡಿವೈ ಚಂದ್ರಚೂಡ್‌ ನಿವೃತ್ತರಾಗಲಿದ್ದು, ಅವರ ಜಾಗಕ್ಕೆ ಜಸ್ಟೀಸ್‌ ಸಂಜೀವ್ ಖನ್ನಾ ಬರಲಿದ್ದಾರೆ.‌

ಹುದ್ದೆಗೆ ಏರುವ ಮೊದಲು ಬಹಳ ನಿರೀಕ್ಷೆಯನ್ನು ಹುಟ್ಟಿಸಿದ್ದ ಜಸ್ಟೀಸ್‌ ಚಂದ್ರಚೂಡ್‌ ಅವರು ನಂತರ ಹಲವು ಪ್ರಕರಣಗಳಲ್ಲಿ ದೇಶದ ಜನರಿಗೆ ನಿರಾಶೆ ಹುಟ್ಟಿಸಿದ್ದರು.

ಇತ್ತೀಚೆಗೆ ಗಣೇಶ ಚತುರ್ಥಿಯ ದಿನ ಪ್ರಧಾನಿ ಮೋದಿ ಜಸ್ಟೀಸ್‌ ಚಂದ್ರಚೂಡ್‌ ಅವರ ಮನೆಗೆ ಹೋಗಿದ್ದು ಸಹ ವಿವಾದಕ್ಕೆ ಕಾರಣವಾಗಿತ್ತು. ಆದರೆ ಮುಖ್ಯ ನ್ಯಾಯಾಧೀಶರು ಇದನ್ನು ಸಮರ್ಥಿಸಿಕೊಂಡು, ಅವರ ಭೇಟಿ ನ್ಯಾಯ ತೀರ್ಮಾನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ನಾವು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಗಳ ಸಂದರ್ಭದಲ್ಲಿ ಭೇಟಿಯಾಗುತ್ತಿರುತ್ತೇವೆ ಎಂದು ಹೇಳಿದ್ದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು