ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜಾಪುರದಲ್ಲಿ ಮಾವೋವಾದಿಗಳ ನೆಲಬಾಂಬಿಗೆ ಇಬ್ಬರು ಯೋಧರ ಸಾವು

P

Peepal Media • ದೇಶ

• 1 ನಿಮಿಷದ ಓದು

ಬಿಜಾಪುರದಲ್ಲಿ ಮಾವೋವಾದಿಗಳ ನೆಲಬಾಂಬಿಗೆ ಇಬ್ಬರು ಯೋಧರ ಸಾವು

ಬಿಜಾಪುರ: ಕಳೆದ ಕೆಲ ದಿನಗಳಿಂದ ಸರಣಿ ಹಿನ್ನಡೆ ಅನುಭವಿಸುತ್ತಿರುವ ಮಾವೋವಾದಿಗಳು ಪೊಲೀಸರತ್ತ ತಮ್ಮ ಪಂಜ ಬೀಸಿದ್ದಾರೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮಂಡಿಮಾರ್ಕಾ ಅರಣ್ಯ ಪ್ರದೇಶದಲ್ಲಿ ಐಇಡಿ ಸ್ಫೋಟಿಸಲಾಗಿದೆ.

ಪರಿಣಾಮವಾಗಿ, ಇಬ್ಬರು ಸೈನಿಕರು ಸಾವನ್ನಪ್ಪಿದರು. ಇತರ ನಾಲ್ವರು ಕಾನ್‌ಸ್ಟೆಬಲ್‌ಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದಾಗ ಮಾವೋವಾದಿಗಳು ನೆಲಬಾಂಬ್ ಸ್ಫೋಟಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ರಾಜ್ಯ ಕಾರ್ಯಪಡೆಯ ಮುಖ್ಯ ಪೇದೆ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸಾಥರ್ ಸಿಂಗ್ ಎಂದು ಗುರುತಿಸಲಾಗಿದೆ. ಕಾನ್‌ಸ್ಟೆಬಲ್‌ಗಳಾದ ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಸಿಂಗ್ ಗಾಯಗೊಂಡಿದ್ದಾರೆ. ಸದ್ಯ ಇವರೆಲ್ಲರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಉತ್ತಮ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಲಾಗಿದೆ.

ಈ ನಡುವೆ ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿರುವ ದಂಡಕಾರಣ್ಯಂ ಮತ್ತೊಮ್ಮೆ ಗುಂಡಿನ ಸದ್ದು ಮಾಡಿದ್ದು ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಓರ್ವ ಎಸ್‌ಎಸ್‌ಐ ಹಾಗೂ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಗಡ್ಚಿರೋಲಿ ಎಸ್ಪಿ ನೀಲೋತ್ಪಾಲ್ ಅವರ ವರದಿಯ ಪ್ರಕಾರ, ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ವಂದೋಲಿ ಗ್ರಾಮದ ಬಳಿ ಸುಮಾರು 15 ಮಾವೋವಾದಿಗಳು ಕಾರ್ಯಾಚರಣೆ ನಡೆಸುತ್ತಿದ್ದ ಪ್ರದೇಶದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿವೆ. ಸುಮಾರು ಐದು ಗಂಟೆಗಳ ಕಾಲ ನಡೆದ ಸುದೀರ್ಘ ಗುಂಡಿನ ಚಕಮಕಿಯಲ್ಲಿ ಎಸ್‌ಐ ಸತೀಶ್ ಪಾಟೀಲ್ ಮತ್ತು ಇತರ ಇಬ್ಬರು ಜವಾನರು ಗಾಯಗೊಂಡಿದ್ದು, ಅವರನ್ನು ಹೆಲಿಕಾಪ್ಟರ್‌ನಲ್ಲಿ ಸ್ಥಳಾಂತರಿಸಲಾಯಿತು.

ಗುಂಡಿನ ದಾಳಿಯ ನಂತರ ಆ ಪ್ರದೇಶದಲ್ಲಿ 12 ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ. ಮೂರು ಎಕೆ-47, ಎರಡು ಐಎನ್‌ಎಸ್‌ಎ, ಒಂದು ಕಾರ್ಬೈನ್, ಒಂದು ಎಸ್‌ಎಲ್‌ಆರ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತರಲ್ಲಿ ತಿಪ್ಪಗಢದ ಡಿವಿಸಿಎಂ ಲಕ್ಷ್ಮಣ್ ಅತ್ರಂ ಮತ್ತು ವಿಶಾಲ್ ಅತ್ರಂ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಈ ಕಾರ್ಯಾಚರಣೆ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಗಡ್ಚಿರೋಲಿ ಪೊಲೀಸ್ ಫೈರಿಂಗ್‌ನಲ್ಲಿ 12 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಎಸ್‌ಪಿ ಮತ್ತು ಐಜಿ ಮಾಹಿತಿ ನೀಡಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇದು ಅತ್ಯಂತ ದೊಡ್ಡ ಕಾರ್ಯಾಚರಣೆಯಾಗಿದೆ ಎಂದು ಹೇಳಿದರು. ಗಡ್ಚಿರೋಲಿ ಪೊಲೀಸರನ್ನು ಅಭಿನಂದಿಸಿದರು. ಅವರಿಗೆ 51 ಲಕ್ಷ ಬಹುಮಾನ ಘೋಷಿಸಲಾಗಿತ್ತು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version