ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಪಕುಲಪತಿಗಳು (ವಿಸಿ) ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭಾರಿ ಸುಧಾರಣೆಗಳನ್ನು ಪ್ರಸ್ತಾಪಿಸಿದ ಯುಜಿಸಿ

PPeepal Media

Peepal Media ದೇಶ

• 1 ನಿಮಿಷದ ಓದು

ಉಪಕುಲಪತಿಗಳು (ವಿಸಿ) ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭಾರಿ ಸುಧಾರಣೆಗಳನ್ನು ಪ್ರಸ್ತಾಪಿಸಿದ ಯುಜಿಸಿ

ದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಉಪಕುಲಪತಿಗಳು (ವಿಸಿ) ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭಾರಿ ಸುಧಾರಣೆಗಳನ್ನು ಪ್ರಸ್ತಾಪಿಸಿದೆ.

ಉದ್ಯಮದ ತಜ್ಞರ ಜೊತೆಗೆ ಸರ್ಕಾರಿ ಯಂತ್ರ, ನೀತಿ ನಿರೂಪಣಾ ಇಲಾಖೆ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನು ವಿಸಿಗಳಾಗಿ ನೇಮಿಸಲು ಶಿಫಾರಸು ಮಾಡಲಾಗಿದೆ. ಯುಜಿಸಿ ನಡೆಸುವ ನೆಟ್ ತೇರ್ಗಡೆಯಾಗದಿದ್ದರೂ ಸ್ನಾತಕೋತ್ತರ ಪದವಿ ಪಡೆದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿಕೊಳ್ಳಬಹುದು ಎಂದು ಸೂಚಿಸಲಾಗಿದೆ. ಅಧ್ಯಕ್ಷ ಜಗದೀಶ್ ಕುಮಾರ್ ಮಾತನಾಡಿ, 2018ರ ನಿಯಮಾವಳಿಗಳ ಬದಲಾಗಿ ಹೊಸ ಯುಜಿಸಿ (ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಶಿಕ್ಷಕರ ಮತ್ತು ಶೈಕ್ಷಣಿಕ ಸಿಬ್ಬಂದಿ ನೇಮಕಕ್ಕೆ ಕನಿಷ್ಠ ವಿದ್ಯಾರ್ಹತೆ, ಉನ್ನತ ಶಿಕ್ಷಣದಲ್ಲಿ ಅನುಸರಿಸಬೇಕಾದ ಮಾನದಂಡಗಳು) ನಿಯಮಾವಳಿ-2025ರಲ್ಲಿ ಜಾರಿಗೆ ಬರುತ್ತವೆ.

ವಿಸಿ ನೇಮಕಾತಿ

ಕನಿಷ್ಠ ಹತ್ತು ವರ್ಷಗಳ ಕಾಲ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದವರು ಈ ಹಿಂದೆ ವಿಸಿಗಳಾಗಿ ನೇಮಕಗೊಳ್ಳಲು ಅರ್ಹರು. ಪ್ರಮುಖ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಿಶ್ವವಿದ್ಯಾಲಯದ ಆಡಳಿತದಲ್ಲಿ ಅನುಭವವನ್ನು ಹೊಂದಿರಬೇಕು. ಹೊಸದಾಗಿ ರೂಪಿಸಲಾದ ನಿಯಮಗಳ ಪ್ರಕಾರ, ಹತ್ತು ವರ್ಷಗಳ ಹಿರಿಯ ಮಟ್ಟದ ಉದ್ಯಮ, ಸರ್ಕಾರಿ ಆಡಳಿತ, ನೀತಿ ನಿರೂಪಣಾ ಇಲಾಖೆ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕೆಲಸ ಮಾಡಿದರೆ ಸಾಕು. ಶೈಕ್ಷಣಿಕವಾಗಿ ಅತ್ಯುತ್ತಮ ದಾಖಲೆಯನ್ನು ಹೊಂದಿರಬೇಕು.

ಹೊಸ ಮಾರ್ಗಸೂಚಿಗಳು ಜಾರಿಗೆ ಬಂದರೆ, 55% ಅಂಕಗಳೊಂದಿಗೆ ಮಾಸ್ಟರ್ ಆಫ್ ಎಂಜಿನಿಯರಿಂಗ್ (ಎಂಇ) ಮತ್ತು ಮಾಸ್ಟರ್ ಆಫ್ ಟೆಕ್ನಾಲಜಿ ಕೋರ್ಸ್‌ಗಳನ್ನು ಪೂರ್ಣಗೊಳಿಸಿದವರು ಯುಜಿಸಿ ನೆಟ್‌ನಲ್ಲಿ ಉತ್ತೀರ್ಣರಾಗದಿದ್ದರೂ ನೇರವಾಗಿ ಸಹಾಯಕ ಪ್ರಾಧ್ಯಾಪಕರಾಗಿ ನೇಮಕಗೊಳ್ಳಬಹುದು. – ಇನ್ನು ಮುಂದೆ ಅಭ್ಯರ್ಥಿಯು ತೆಗೆದುಕೊಂಡ ಅತ್ಯುನ್ನತ ಕೋರ್ಸ್ ಆಧರಿಸಿ ಪಾಠಗಳನ್ನು ಕಲಿಸಬಹುದು. – ಅಭ್ಯರ್ಥಿಯು ಅಧ್ಯಯನ ಮಾಡಿದ ವಿಷಯಗಳ ಹೊರತಾಗಿಯೂ, ಇನ್ನೊಂದು ವಿಷಯದಲ್ಲಿ NET ನಲ್ಲಿ ಉತ್ತೀರ್ಣರಾದರೆ, ಅವರು ಅದೇ ವಿಷಯಗಳನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು