ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉತ್ತರ ಪ್ರದೇಶ: ವಿದ್ಯಾರ್ಥಿಯನ್ನು ಧಾರ್ಮಿಕವಾಗಿ ನಿಂದಿಸಿ, ಹೊಡೆಸಿ ಅಪಮಾನಿಸಿದ ಶಾಲೆಯನ್ನು ಮುಚ್ಚಲು ಆದೇಶ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಉತ್ತರ ಪ್ರದೇಶ: ವಿದ್ಯಾರ್ಥಿಯನ್ನು ಧಾರ್ಮಿಕವಾಗಿ ನಿಂದಿಸಿ, ಹೊಡೆಸಿ ಅಪಮಾನಿಸಿದ ಶಾಲೆಯನ್ನು ಮುಚ್ಚಲು ಆದೇಶ

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖುಬ್ಬಾಪುರ ಗ್ರಾಮದಲ್ಲಿರುವ ನೇಹಾ ಪಬ್ಲಿಕ್ ಶಾಲೆಯನ್ನು ಮುಚ್ಚಲು ಆದೇಶಿಸಲಾಗಿದೆ. ಈ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಮಕ್ಕಳಿಂದ ಹೊಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಎರಡು ದಿನಗಳ ಹಿಂದೆ ಶುಕ್ರವಾರ ಈ ಶಾಲೆಯ ವಿವಾದಾತ್ಮಕ ವಿಡಿಯೋವೊಂದು ಮುನ್ನೆಲೆಗೆ ಬಂದಿದೆ. ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು ಇತರ ವಿದ್ಯಾರ್ಥಿಗಳಿಂದ ಹೊಡೆಸುತ್ತಿರುವುದನ್ನು ಮತ್ತು ಅದೇ ಸಮಯದಲ್ಲಿ ಮುಸ್ಲಿಮರನ್ನು ಇದೇ ರೀತಿ ಸುಧಾರಿಸಬೇಕು ಎಂದು ಹೇಳುವುದನ್ನು ವೀಡಿಯೊದಲ್ಲಿ ಕಾಣಬಹುದು. ವೀಡಿಯೋ ವೈರಲ್ ಆದ ನಂತರ ಪ್ರಕರಣದ ತನಿಖೆಯಲ್ಲಿ ಶಾಲೆಯ ಮಾನ್ಯತೆ ಒಂದು ವರ್ಷದ ಹಿಂದೆಯೇ ಮುಗಿದಿದೆ ಎಂದು ತಿಳಿದುಬಂದಿದೆ.

ಮೂಲ ಶಿಕ್ಷಣಾಧಿಕಾರಿ ಶುಭಂ ಶುಕ್ಲಾ ಮಾತನಾಡಿ, “2019ನೇ ಸಾಲಿನಲ್ಲಿ ನರ್ಸರಿಯಿಂದ ಐದನೇ ತರಗತಿವರೆಗೆ ಶಾಲೆ ಮಾನ್ಯತೆ ಪಡೆದಿದೆ. ಇದನ್ನು ಮೂರು ವರ್ಷಗಳ ಕಾಲ ತಾತ್ಕಾಲಿಕವಾಗಿ ನೀಡಲಾಗುತ್ತದೆ. ಇದರ ಅವಧಿ 2022ರಲ್ಲಿ ಪೂರ್ಣಗೊಂಡಿದೆ. ಇದಾದ ಬಳಿಕ ಆಡಳಿತ ಮಂಡಳಿ ಮಾನ್ಯತೆಯನ್ನು ನವೀಕರಿಸಿರಲಿಲ್ಲ. ಮಾನ್ಯತೆ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಶಾಲೆಯನ್ನು ಮುಚ್ಚಲು ಆದೇಶ ನೀಡಲಾಗಿದೆ. ಮುಂದಿನ ಇಲಾಖಾ ಕ್ರಮ ಕೈಗೊಳ್ಳಲಾಗುತ್ತಿದೆ.” ಎಂದಿದ್ದಾರೆ.

ಶುಕ್ರವಾರ ಹೊರಬಿದ್ದ ವಿಡಿಯೋದಲ್ಲಿ ಶಾಲೆಯ ಮಹಿಳಾ ಶಿಕ್ಷಕಿಯೊಬ್ಬರು ಮುಸ್ಲಿಂ ಹುಡುಗನಿಗೆ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿಸುತ್ತಿರುವುದು ಕಂಡುಬಂದಿದೆ. ಇವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೈರಲ್ ವೀಡಿಯೊದಲ್ಲಿ, ಮಹಿಳಾ ಶಿಕ್ಷಕಿಯೂ ಸಹ ನಿರ್ದಿಷ್ಟ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಶಾಲೆ ಮುಚ್ಚಿದ ನಂತರ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲಾಗುತ್ತದೆ ಎನ್ನಲಾಗಿದೆ.

ವಿಷಯಗಳು: #kannada #peepal #peepalmedia #UP
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು