ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಆರು ಮಂದಿ ಸಾವು

P

Peepal Media • ದೇಶ

• 1 ನಿಮಿಷದ ಓದು

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಆರು ಮಂದಿ ಸಾವು

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಜಿರಿಬಾಮ್ ಜಿಲ್ಲೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಬೆಳಗ್ಗೆ ನಿದ್ದೆಯಲ್ಲಿದ್ದ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಇದು ಎರಡು ಗುಂಪುಗಳ ನಡುವೆ ತೀವ್ರ ಉದ್ರಿಕ್ತ ವಾತಾವರಣಕ್ಕೆ ಕಾರಣವಾಯಿತು. ಗುಂಡಿನ ದಾಳಿಯೂ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಇನ್ನೂ ಉಗ್ರರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಮತ್ತೊಂದೆಡೆ, ಭದ್ರತಾ ಪಡೆಗಳು ಚುರಾಚಂದ್‌ಪುರದಲ್ಲಿ ಉಗ್ರರಿಗೆ ಸೇರಿದ ಮೂರು ಬಂಕರ್‌ಗಳನ್ನು ಧ್ವಂಸಗೊಳಿಸಿವೆ. ಬಿಷ್ಣುಪುರ ಜಿಲ್ಲೆಯ ರಾಕೆಟ್ ದಾಳಿಗಳು ಇಲ್ಲಿಂದಲೇ ಉಡಾವಣೆಯಾದಂತಿದೆ.

ರಾಕೆಟ್ ದಾಳಿಯಲ್ಲಿ ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ರಾಕೆಟ್ ದಾಳಿಯು ಟ್ರೋಂಗ್ಲಾವ್ ಬಿ ನಲ್ಲಿ ಬೆಳಿಗ್ಗೆ 4.30ಕ್ಕೆ ನಡೆಯಿತು. ಈ ದಾಳಿಯಲ್ಲಿ ಎರಡು ಕಟ್ಟಡಗಳಿಗೆ ಹಾನಿಯಾಗಿದೆ. ಎರಡನೇ ದಾಳಿ ಮೊಯಿರಾಂಗ್‌ನಲ್ಲಿರುವ ಮಾಜಿ ಸಿಎಂ ಮೈರೆಂಬಮ್ ಕೊಯಿರೆಂಗ್ ಅವರ ವಸತಿ ಆವರಣದಲ್ಲಿ ಇದು 3 ಗಂಟೆಗೆ ಸಂಭವಿಸಿದೆ. ರಾಕೆಟ್‌ಗೆ ಅಳವಡಿಸಿದ್ದ ಬಾಂಬ್‌ಗಳು ಸ್ಫೋಟಗೊಂಡು ವೃದ್ಧ ಮೃತಪಟ್ಟಿದ್ದಾನೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪೊಲೀಸರು ಚುರಚಂದಪುರದ ಮುವಲ್ಸಾಂಗ್ ಮತ್ತು ಲೈಕಾ ಮುವಲ್ಸು ಗ್ರಾಮಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಮೂರು ಬಂಕರ್ ಗಳನ್ನು ನೆಲಸಮಗೊಳಿಸಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version