ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೀರಿನ ಬಿಕ್ಕಟ್ಟು: ಬೆಂಗಳೂರಿನ ಐಟಿ ಕಂಪನಿಗಳನ್ನು ಸೆಳೆಯಲು ಕೇರಳ ಪ್ರಯತ್ನ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ನೀರಿನ ಬಿಕ್ಕಟ್ಟು: ಬೆಂಗಳೂರಿನ ಐಟಿ ಕಂಪನಿಗಳನ್ನು ಸೆಳೆಯಲು ಕೇರಳ ಪ್ರಯತ್ನ

ತಿರುವನಂತಪುರಂ: ಬೆಂಗಳೂರಿನಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಇಲ್ಲಿನ ಐಟಿ ಕಂಪನಿಗಳನ್ನು ಓಲೈಸಿ ತನ್ನ ರಾಜ್ಯಕ್ಕೆ ಕೊಂಡೊಯ್ಯಲು ಕೇರಳ ಯತ್ನಿಸುತ್ತಿದೆ. ಈ ಮೂಲಕ ಕೇರಳದಲ್ಲಿ ಹೆಚ್ಚಿನ ಐಟಿ ಕಂಪನಿಗಳನ್ನು ಆಕರ್ಷಿಸಲು ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಯೋಜಿಸಿದೆ.

ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಲು ಯೋಜಿಸುತ್ತಿರುವ ಐಟಿ ಕಂಪನಿಗಳೊಂದಿಗೆ ಚರ್ಚೆ ನಡೆಸಲು ರಾಜ್ಯದ ಅಧಿಕಾರಿಗಳ ತಂಡವನ್ನು ಬೆಂಗಳೂರಿಗೆ ನಿಯೋಜಿಸಲಾಗುವುದು ಎಂದು ಕೇರಳ ಕೈಗಾರಿಕಾ ಸಚಿವ ಪಿ. ರಾಜೀವ್ ಹೇಳಿದರು.

ಬೆಂಗಳೂರು ಮೂಲದ ಹಲವು ಐಟಿ ಕಂಪನಿಗಳು ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಲು ಆಯ್ಕೆಗಳನ್ನು ಹುಡುಕುತ್ತಿವೆ. ಕೇರಳ ರಾಜ್ಯದಲ್ಲಿನ ಅನುಕೂಲಕರ ಅಂಶಗಳ ಬಗ್ಗೆ ಇಂತಹ ಕಂಪನಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುತ್ತಿದೆ. ಸದ್ಯ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ನಮಗೆ ಕೇರಳದಲ್ಲಿ ನೀರಿನ ಲಭ್ಯತೆ ಇರುವುದು ಅನುಕೂಲಕರ ಅಂಶ’ ಎಂದು ರಾಜೀವ್ ಹೇಳಿದ್ದಾರೆ.

ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್ ಚಂದ್ರಶೇಖರ್, ‘ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ತಿರುವನಂತಪುರಂ ನಗರವನ್ನು ದೇಶದ ಐಟಿ ಕೇಂದ್ರವನ್ನಾಗಿ ಮಾಡಲಾಗುವುದು’ ಎಂದು ಇತ್ತೀಚೆಗೆ ಘೋಷಿಸಿದ್ದರು.

ಕೇರಳವು ತಿರುವನಂತಪುರಂ, ಕೊಚ್ಚಿ ಮತ್ತು ಕೊಕ್ಕೋಡ್‌ನಲ್ಲಿ ಮೂರು ಪ್ರಮುಖ ಐಟಿ ಪಾರ್ಕ್‌ಗಳನ್ನು ಹೊಂದಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಪ್ರಾದೇಶಿಕ ಐಟಿ ಪಾರ್ಕ್‌ಗಳನ್ನು ಸಹ ಹೊಂದಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು