ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಮ್ಮು-ಕಾಶ್ಮೀರದಲ್ಲಿ ಯಾವಾಗ ಬೇಕಾದರೂ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಮಾಹಿತಿ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಜಮ್ಮು-ಕಾಶ್ಮೀರದಲ್ಲಿ ಯಾವಾಗ ಬೇಕಾದರೂ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಮಾಹಿತಿ

ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಆದರೆ, ಈ ಕುರಿತು ಚುನಾವಣಾ ಆಯೋಗವೇ ನಿರ್ಧಾರ ಕೈಗೊಳ್ಳಲಿದೆ ಎಂದು ಅದು ಹೇಳಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಯಾವುದೇ ಸಮಯದ ಮಿತಿ ಇದೆಯೇ ಎಂದು ಗುರುವಾರ ಭಾರತದ ಸುಪ್ರೀಂ ಕೋರ್ಟ್ ಕೇಳಿದ ಪ್ರಶ್ನೆಗೆ ಕೇಂದ್ರವು ಪ್ರತಿಕ್ರಿಯಿಸಿತು. ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಅಗತ್ಯ ನೇಮಕಾತಿಗಳನ್ನು ಮಾಡುತ್ತಿದ್ದೇವೆ ಮತ್ತು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಕೇಂದ್ರವು ಬಹಿರಂಗಪಡಿಸಿದೆ.

370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಕೆಲ ದಿನಗಳಿಂದ ವಾದಗಳು ನಡೆಯುತ್ತಿರುವುದು ಗೊತ್ತೇ ಇದೆ. ಇತ್ತೀಚೆಗೆ ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಉತ್ತರಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಸಮಿತಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು. ಈ ಚುನಾವಣೆಗಳು ಮೂರು ಹಂತಗಳಲ್ಲಿ ನಡೆಯಲಿದೆ ಎಂದೂ ಅವರು ಹೇಳಿದರು. ಮೊದಲ ಎರಡು ಹಂತದಲ್ಲಿ ಪಂಚಾಯಿತಿ ಮತ್ತು ಪುರಸಭೆ ಚುನಾವಣೆ ನಡೆಯಲಿದ್ದು, ನಂತರ ವಿಧಾನಸಭೆ ಮಟ್ಟದ ಚುನಾವಣೆ ನಡೆಯಲಿದೆ ಎಂದರು.

ಎರಡು ದಿನಗಳ ಹಿಂದೆ ಅರ್ಜಿದಾರರ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಜಾಪ್ರಭುತ್ವವು ಬಹಳ ಮುಖ್ಯವಾಗಿದೆ ಎಂದು ಹೇಳಿತು. ರಾಜ್ಯದ ಸ್ಥಾನಮಾನ ಮರುಸ್ಥಾಪನೆ ಬಹಳ ಮುಖ್ಯ ಎಂದು ಪೀಠ ಹೇಳಿದೆ. ಅದಕ್ಕೆ ಉತ್ತರಿಸಿದ ಮೆಹ್ತಾ..’ಜಮ್ಮು ಮತ್ತು ಕಾಶ್ಮೀರದ ಕೇಂದ್ರೀಯ ಆಡಳಿತ ಸ್ಥಾನಮಾನ ಶಾಶ್ವತವಲ್ಲ. ಲಡಾಖ್‌ಗೆ ಸಂಬಂಧಿಸಿದಂತೆ, ಯುಟಿಯ ಸ್ಥಿತಿ ಸ್ವಲ್ಪ ಸಮಯದವರೆಗೆ ಮುಂದುವರಿಯುವ ಸಾಧ್ಯತೆಯಿದೆ,” ಎಂದು ಹೇಳಿದರು. ಆದರೆ, ಈ ಸಂಬಂಧ ಆ.31ರಂದು ಪೀಠಕ್ಕೆ ಸಂಪೂರ್ಣ ವಿವರಣೆ ನೀಡುವುದಾಗಿ ತಿಳಿಸಿದರು.

ವಿಷಯಗಳು: #india #karnataka #news #peepal #peepalmedia
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು