ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾಬಾ ಸಿದ್ದಿಕಿಯನ್ನು ಕೊಂದಿ**ದ್ದು ನಾವೇ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

P

Peepal Media • ದೇಶ

• 1 ನಿಮಿಷದ ಓದು

ಬಾಬಾ ಸಿದ್ದಿಕಿಯನ್ನು ಕೊಂದಿ**ದ್ದು ನಾವೇ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಅಜಿತ್ ಪವಾರ್ ಬಣದ ಹಿರಿಯ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ದೇಶಾದ್ಯಂತ ಸಂಚಲನ ಮೂಡಿಸಿದೆ. ದಾಳಿಕೋರರು 9 ಎಂಎಂ ಪಿಸ್ತೂಲ್‌ಗಳಿಂದ ಗುಂಡು ಹಾರಿಸಿದ್ದರಿಂದ ಬಾಬಾ ಸಿದ್ದಿಕಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿಯನ್ನು ಕೊಂದವರು ತಾನೇ ಎಂದು ಘೋಷಿಸಿದೆ.

ಈ ನಡುವೆ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಇದುವರೆಗೆ ಮೂವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಸಿದ್ದಿಕಿಯನ್ನು ಹತ್ಯೆ ಮಾಡಲು ಒಂದು ತಿಂಗಳ ಕಾಲ ಪ್ಲಾನ್ ಮಾಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳು ಸಿದ್ದಿಕಿ ಹತ್ಯೆಗೆ ತಲಾ ರೂ.50 ಸಾವಿರ ಮುಂಗಡವಾಗಿ ನೀಡಿರುವುದು ಬಯಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅವರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.

ಹತ್ಯೆಗೀಡಾದ ಬಾಬಾ ಸಿದ್ದಿಕಿ ಬಾಲಿವುಡ್ ಸ್ಟಾರ್ ಹೀರೋ ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನಾದಿ ಕಾಲದಿಂದಲೂ ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡುತ್ತಿರುವುದು ಗೊತ್ತೇ ಇದೆ. ಇದೀಗ ಆಪ್ತ ಸ್ನೇಹಿತನ ಹತ್ಯೆಯ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಅವರಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಬಂಧಿತ ಮೂವರು ಆರೋಪಿಗಳನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರನ್ನು ಎರಡು ವಾರಗಳ ಕಸ್ಟಡಿಗೆ ಒಪ್ಪಿಸುವಂತೆ ಕೋರಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version