ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇಶದಲ್ಲಿ ಗೋಧಿ ಕೊರತೆ: ಏಳು ವರ್ಷಗಳಷ್ಟು ಕನಿಷ್ಟ ಮಟ್ಟಕ್ಕಿಳಿದ ದಾಸ್ತಾನು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ದೇಶದಲ್ಲಿ ಗೋಧಿ ಕೊರತೆ: ಏಳು ವರ್ಷಗಳಷ್ಟು ಕನಿಷ್ಟ ಮಟ್ಟಕ್ಕಿಳಿದ ದಾಸ್ತಾನು

ದೆಹಲಿ: ಗೋದಿ ಬೆಳೆಯುವ ರಾಷ್ಟ್ರಗಳಲ್ಲಿನ ಯುದ್ಧದ ಸನ್ನಿವೇಶ ಮತ್ತು ಹವಮಾನ ವೈಪರೀತ್ಯದಿಂದಾಗಿ ಜಗತ್ತು ಬಳಲುತ್ತಿರುವ ಸಮಯದಲ್ಲಿ ಆಹಾರಕ್ಕೆ ಸಂಬಂಧಿಸಿದಂತೆ ದೇಶದ ರಾಜಧಾನಿಯಿಂದ ಆತಂಕಕಾರಿ ಸುದ್ದಿಯೊಂದು ಬಂದಿದೆ. ದೇಶದ ಗೋಧಿ ದಾಸ್ತಾನು ಏಳು ವರ್ಷಗಳಲ್ಲೇ ಅತಿ ಕನಿಷ್ಠ ಮಟ್ಟಕ್ಕೆ ಇಳಿದೆ. ಅಕ್ಕಿಯ ಬೆಲೆ ಗಗನಕ್ಕೇರಿರುವ ಸಮಯದಲ್ಲಿ ಈ ಸುದ್ದಿ ದೇಶದ ಜನಸಾಮಾನ್ಯರಲ್ಲಿ ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮತ್ತು ರಾಜ್ಯ ಆಹಾರ ಏಜೆನ್ಸಿಗಳ ಅಂಕಿಅಂಶಗಳ ಪ್ರಕಾರ, ಜನವರಿ 1ರ ಹೊತ್ತಿಗೆ ದೇಶಾದ್ಯಂತ ಕೇಂದ್ರ ಸರ್ಕಾರದ ಗೋದಾಮುಗಳಲ್ಲಿ 163.53 ಲಕ್ಷ ಟನ್ ಗೋಧಿ ದಾಸ್ತಾನು ಇದೆ. 2017ರ ನಂತರ ಈ ಮಟ್ಟಕ್ಕೆ ಮೀಸಲು ಕುಸಿದಿರುವುದು ಇದೇ ಮೊದಲು. ಗೋಧಿ ದಾಸ್ತಾನುಗಳ ಕನಿಷ್ಠ ಬಫರ್ ಮಟ್ಟವನ್ನು 138 ಲಕ್ಷ ಟನ್‌ಗಳಿಗೆ ನಿಗದಿಪಡಿಸಲಾಗಿದೆ.

ಗೋಧಿ ದಾಸ್ತಾನು ಪ್ರಸ್ತುತ ಬಫರ್ ಮಟ್ಟಕ್ಕಿಂತ ಹೆಚ್ಚಿದೆ. ಆದರೆ, ಉಕ್ರೇನ್-ರಷ್ಯಾ, ಇಸ್ರೇಲ್-ಹಮಾಸ್, ಇರಾನ್-ಪಾಕ್ ದೇಶಗಳ ನಡುವೆ ನಡೆಯುತ್ತಿರುವ ಬಿಕ್ಕಟ್ಟು ಹಲವು ದೇಶಗಳ ರಫ್ತು ಮತ್ತು ಆಮದಿನ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಇದಲ್ಲದೇ ಹಣದುಬ್ಬರದ ಭೀತಿಯೂ ದೇಶವನ್ನು ಕಾಡುತ್ತಿದೆ. ದೇಶದಲ್ಲಿ ಗೋಧಿ ಕೊರತೆಯಾದರೆ ಅದು ಆಹಾರದ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ. ಕೂಡಲೇ ಗೋಧಿ ದಾಸ್ತಾನು ಹೆಚ್ಚಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸುತ್ತಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು