ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜಕೀಯವನ್ನು ಮೀರಿದ ಸಂಕಟಗಳೂ ಇವೆ: ಸಿಜೆಪಿ ಪ್ರತಿಭಟನೆಯಿಂದ ದೂರವುಳಿದ ಸೋನಮ್ ವಾಂಗ್ಚುಕ್!

PPeepal Media

Peepal Media • ದೇಶ

• 1 ನಿಮಿಷದ ಓದು

ರಾಜಕೀಯವನ್ನು ಮೀರಿದ ಸಂಕಟಗಳೂ ಇವೆ: ಸಿಜೆಪಿ ಪ್ರತಿಭಟನೆಯಿಂದ ದೂರವುಳಿದ ಸೋನಮ್ ವಾಂಗ್ಚುಕ್!

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಮತ್ತು ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಶನಿವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ತಾನು ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಖ್ಯಾತ ಪರಿಸರ ಮತ್ತು ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ವಿಡಿಯೋ ಸಮೇತ ಸಂದೇಶ ಹಂಚಿಕೊಂಡಿರುವ ಅವರು, ಪ್ರಸಿದ್ಧ ಕವಿ ಫೈಜ್ ಅಹ್ಮದ್ ಫೈಜ್ ಅವರ “ಔರ್ ಭೀ ಗಮ್ ಹೈಂ ಜಮಾನೆ ಮೇ ಸಿಯಾಸತ್ ಕೆ ಸಿವಾ… ರಾಹತೇಂ ಔರ್ ಭೀ ಹೈಂ ವಸ್ಲ್ ಕೀ ರಾಹತ್ ಕೆ ಸಿವಾ” (ಈ ಜಗತ್ತಿನಲ್ಲಿ ರಾಜಕೀಯಕ್ಕಿಂತ ಮೀರಿದ ಸಂಕಟಗಳೂ ಇವೆ…) ಎಂಬ ಕವನದ ಸಾಲುಗಳನ್ನು ಉಲ್ಲೇಖಿಸಿ ಧರಣಿಗೆ ಗೈರಾಗುತ್ತಿರುವ ಕಾರಣವನ್ನು ವಿವರಿಸಿದ್ದಾರೆ.

ಲಡಾಖ್‌ನ ಕಠಿಣ ಚಳಿಗಾಲ ಆರಂಭವಾಗುತ್ತಿದ್ದು, ಹಿಮಾಲಯ ಪ್ರದೇಶದ ನೀರಿನ ಭದ್ರತೆಗಾಗಿ ಕೃತಕ ಹಿಮನದಿಗಳನ್ನು (Artificial Glaciers) ನಿರ್ಮಿಸುವ ಕೆಲಸ ಹಾಗೂ 200ಕ್ಕೂ ಹೆಚ್ಚು ಅಪಾಯಕಾರಿ ಹಿಮ ಸರೋವರಗಳ ದಿಢೀರ್ ಪ್ರವಾಹದ (GLOF) ಭೀತಿಯನ್ನು ನಿಯಂತ್ರಿಸುವ ಮಹತ್ವದ ವೈಜ್ಞಾನಿಕ ಪ್ರಯೋಗಗಳಲ್ಲಿ ತಾವು ನಿರತರಾಗಿರುವುದಾಗಿ ತಿಳಿಸಿದ್ದಾರೆ. “ಸರ್ಕಾರವು ನಮ್ಮ ಕೆಲಸಕ್ಕೆ ಹಲವು ಅಡೆತಡೆಗಳನ್ನು ಒಡ್ಡುತ್ತಿದ್ದರೂ, ದೇಶದ ಭದ್ರತೆ ಮತ್ತು ಪರಿಸರಕ್ಕಾಗಿ ನಾವು ಕೆಲಸ ಮುಂದುವರಿಸಬೇಕಿದೆ,” ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳ ನಾಯಕರು ಒಗ್ಗಟ್ಟು ಮತ್ತು ವಿವೇಕ ಪ್ರದರ್ಶಿಸಬೇಕೆಂದು ಕೋರಿರುವ ವಾಂಗ್ಚುಕ್, ದೇಶದ ‘ಜೆನ್-ಜಿ’ (Gen-Z) ಯುವ ಸಮುದಾಯಕ್ಕೆ ಮಹತ್ವದ ಮನವಿ ಮಾಡಿದ್ದಾರೆ. “ಪ್ರತಿಭಟನಾ ನಿರತ ಯುವ ಸ್ನೇಹಿತರು ಯಾವುದೇ ಪರಿಸ್ಥಿತಿಯಲ್ಲೂ ಸಂಪೂರ್ಣ ಶಾಂತಿ ಮತ್ತು ಅಹಿಂಸೆಯನ್ನು ಕಾಪಾಡಿಕೊಳ್ಳಬೇಕು. ಅಹಿಂಸೆ ಎಂಬುದು ಗಾಂಧೀಜಿ ನಮಗೆ ನೀಡಿದ ಕೊಡುಗೆ. ಜೂನ್‌ನಲ್ಲಿ ನಾನು ಜಂತರ್ ಮಂತರ್‌ಗೆ ಕೊಂಡೊಯ್ಯಲು ಯತ್ನಿಸಿದ್ದು ಇದೇ ಅಹಿಂಸಾ ಮಾರ್ಗವನ್ನು. ನಾವು ಬಾಪೂಜಿಯ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ ಎಂಬ ವಿಶ್ವಾಸವಿದೆ,” ಎಂದು ಅವರು ಹಾರೈಸಿದ್ದಾರೆ.

ಉಲ್ಲೇಖನೀಯವೆಂದರೆ, ಕಳೆದ ಜೂನ್‌ನಲ್ಲಿ ಅಂದಿನ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹವೇ ಪ್ರಮುಖ ಚಾಲನಾ ಶಕ್ತಿಯಾಗಿತ್ತು. ನಂತರದ ಬೆಳವಣಿಗೆಗಳಲ್ಲಿ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು