ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆಪರೇಷನ್ ಸಿಂಧೂರ್ : ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗಿದ್ದೇಕೆ?

P

Peepal Media Desk • ದೇಶ

• 1 ನಿಮಿಷದ ಓದು

ಆಪರೇಷನ್ ಸಿಂಧೂರ್ : ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗಿದ್ದೇಕೆ?

ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಸರ್ವಪಕ್ಷಗಳ ಸಭೆ ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯಲ್ಲಿ ನಡೆದಿದೆ. ನಿನ್ನೆಯಷ್ಟೇ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಸರ್ವಪಕ್ಷಗಳ ಸಭೆಯಲ್ಲಿ ಭಾಗವಹಿಸಿ ಆಪರೇಷನ್ ಸಿಂಧೂರ್ ಬಗ್ಗೆ ವಿವರಣೆ ನೀಡಲಿದ್ದಾರೆ ಎಂಬ ಭರವಸೆ ಇದೆ ಎಂದು ಹೇಳಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಗೈರು ಚರ್ಚೆಗೆ ಗ್ರಾಸವಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ಚಟುವಟಿಕೆಗೆ ಪ್ರತಿಕಾರವಾಗಿ ನಡೆದ ಆಪರೇಷನ್ ಸಿಂಧೂರ್ ಭಾರತೀಯ ಸೇನೆಗೆ ದೊಡ್ಡ ಕೀರ್ತಿ ತಂದ ಕಾರ್ಯ. ಅದಾದ ನಂತರ ಕರೆದ ಸರ್ವಪಕ್ಷಗಳ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿ ಆ ಸ್ಥಾನಕ್ಕಿರುವ ಗಂಭೀರತೆಗೆ ಮತ್ತು ಜವಾಬ್ದಾರಿಗೆ ಸಾಕ್ಷಿ. ಹೀಗಿರುವಾಗ ಇಂತಹ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸದೇ ಇರುವುದರ ಬಗ್ಗೆ ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.

ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಬೆಳವಣಿಗೆಗಳನ್ನು ಕುರಿತು ಈಗಾಗಲೇ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರಣೆ ನೀಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಂಸತ್‌ ಭವನದಲ್ಲಿ ಈ ಸಭೆ ನಡೆಯುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ.ನಡ್ಡಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸರ್ಕಾರದ ಪರವಾಗಿ ಹಾಜರಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಪಕ್ಷದಿಂದ ಭಾಗವಹಿಸಿದ್ದಾರೆ.

ಇತರ ಪ್ರತಿಪಕ್ಷಗಳಾದ ಸಂದೀಪ್ ಬಂಡೋಪಾಧ್ಯಾಯ (ಟಿಎಂಸಿ), ಟಿ.ಆ‌ರ್. ಬಾಲು (ಡಿಎಂಕೆ), ರಾಮ್ ಗೋಪಾಲ್‌ ಯಾದವ್ (ಸಮಾಜವಾದಿ ಪಕ್ಷ), ಸಂಜಯ್ ಸಿಂಗ್ (ಎಎಪಿ), ಸಂಜಯ್ ರಾವುತ್ (ಶಿವ ಸೇನಾ, ಯುಬಿಟಿ), ಸುಪ್ರಿಯಾ ಸುಳೆ (ಎನ್‌ಸಿಪಿ ಶರದ್ ಪವಾರ್) ಭಾಗವಹಿಸಿದ್ದಾರೆ. ಸಂಜಯ್ ಝಾ (ಜೆಡಿಯು), ಎಲ್‌ಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರೂ ಸಭೆಯಲ್ಲಿ ಭಾಗಿಯಾಗಿದ್ದಾರೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version