ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಕೇವಲ ಆರು ತಿಂಗಳ ಹಿಂದಷ್ಟೇ ತಾಂತ್ರಿಕ ದೋಷ ಕಂಡ ವಿಮಾನವನ್ನು ಮತ್ತೆ ಹಾರಲು ಬಿಟ್ಟದ್ಯಾಕೆ?

PPeepal Media Desk

Peepal Media Desk ದೇಶ, ವಿಶೇಷ

• 1 ನಿಮಿಷದ ಓದು

ಕೇವಲ ಆರು ತಿಂಗಳ ಹಿಂದಷ್ಟೇ ತಾಂತ್ರಿಕ ದೋಷ ಕಂಡ ವಿಮಾನವನ್ನು ಮತ್ತೆ ಹಾರಲು ಬಿಟ್ಟದ್ಯಾಕೆ?

ಗುಜರಾತ್ ವಿಮಾನ ನಿಲ್ದಾಣದಲ್ಲಿ ಭೀಕರವಾಗಿ ಪತನಗೊಂಡ ಏರ್ ಇಂಡಿಯಾ ವಿಮಾನವು ಕೇವಲ ಆರು ತಿಂಗಳ ಹಿಂದೆ ಗಂಭೀರ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿತ್ತು ಎಂದು ಮಾಧ್ಯಮ ವರದಿಗಳು ಬಹಿರಂಗಪಡಿಸಿವೆ. ಅಷ್ಟಾದರೂ ವಿಮಾನ ನಿಲ್ದಾಣದ ಅಧಿಕಾರಿಗಳು AI 171 ವಿಮಾನವನ್ನು ಹಾರಾಟಕ್ಕೆ ಬಿಟ್ಟ ಬಗ್ಗೆ ಗಂಭೀರ ಚಿಂತನೆಗೆ ಹಚ್ಚಿದೆ.

ಅಹಮದಾಬಾದ್-ಲಂಡನ್ ಗ್ಯಾಟ್ವಿಕ್ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ AI-171 ವಿಮಾನವನ್ನು ಡಿಸೆಂಬರ್ 2024 ರಲ್ಲಿ ಪ್ರಮುಖ ತಾಂತ್ರಿಕ ದೋಷದಿಂದಾಗಿ ಸ್ಥಗಿತಗೊಳಿಸಲಾಗಿತ್ತು. ಆ ಸಮಯದಲ್ಲಿ ಸುಮಾರು 300 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿ ಸಿಲುಕಿಕೊಂಡಿದ್ದರು.

ಈ ಘಟನೆಯು ಅಂದು ನಿರ್ವಹಣಾ ದೋಷಗಳು ಮತ್ತು ಹಾರಾಟ ಸುರಕ್ಷತಾ ಕಾರ್ಯವಿಧಾನಗಳ ಬಗ್ಗೆ ಟೀಕೆಗಳನ್ನು ಹುಟ್ಟುಹಾಕಿತ್ತು‌. ಆದರೂ ನಂತರ ಈ ವಿಮಾನವನ್ನು ಹಾರಾಟದ ಕಾರ್ಯಾಚರಣೆಗೆ ಪುನರಾರಂಭಿಸಲು ಅನುಮತಿ ನೀಡಲಾಯಿತು.

ಸಧ್ಯ ಈ ಒಂದು ಮಾಹಿತಿ ಈಗ ಸ್ಥಳೀಯ ಆಡಳಿತ ಮತ್ತು ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ತೀವ್ರ ಅನುಮಾನ ಮತ್ತು ಆಕ್ರೋಶಕ್ಕೆ ಕಾರಣವಾಗಬಹುದು ಎನ್ನಲಾಗಿದೆ. ಜೊತೆಗೆ ಆದ ಅನಾಹುತಕ್ಕೆ ಈ ಬೆಳವಣಿಗೆಗೆ ನೈಜ ಹೊಣೆ ಯಾರು ಹೊರಬೇಕು ಎಂಬ ಪ್ರಶ್ನೆ ಎದುರಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು