ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಊರಿನಲ್ಲಿ ನೀರು ನಿಂತಿದ್ದಕ್ಕೆ ಜೆಜೆಪಿ ಶಾಸಕನ ಕಪಾಳಕ್ಕೆ ಹೊಡೆದ ಮಹಿಳೆ!

P

Peepal Media Desk • ದೇಶ

• 1 ನಿಮಿಷದ ಓದು

ಊರಿನಲ್ಲಿ ನೀರು ನಿಂತಿದ್ದಕ್ಕೆ ಜೆಜೆಪಿ ಶಾಸಕನ ಕಪಾಳಕ್ಕೆ ಹೊಡೆದ ಮಹಿಳೆ!

ಜೆಜೆಪಿ ಶಾಸಕ ಈಶ್ವರ್ ಸಿಂಗ್ ಅವರು ಬುಧವಾರ ತಮ್ಮ ಕ್ಷೇತ್ರದಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾಗ ಮಹಿಳೆಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ, ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡುತ್ತಿದೆ.

ಜನನಾಯಕ್ ಜನತಾ ಪಕ್ಷ (ಜೆಜೆಪಿ) ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿದೆ.

ಘಗ್ಗರ್ ನದಿ ಉಕ್ಕಿ ಹರಿಯುತ್ತಿರುವ ಕಾರಣ ಸಿಂಗ್ ಅವರ ಘುಲಾ ಕ್ಷೇತ್ರದ ಭಾಟಿಯಾ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾ ಬಗ್ಗೆ ಮಹಿಳೆ ಆಕ್ರೋಶಗೊಂಡಿದ್ದರು.

ಈ ಕುರಿತು ಸಿಂಗ್‌ ಅವರನ್ನು ಕೇಳಿದಾಗ ತಾನು ಪರಿಸ್ಥಿತಿಯನ್ನು ಅವಲೋಕಿಸಲು ಹೋಗಿರುವುದಾಗಿ ಹೇಳಿದ್ದರು. ತಮ್ಮ ಊರಿನ ಸಣ್ಣ ಡ್ಯಾಮ್‌ ಉಕ್ಕಿ ಹರಿದು ಊರ ತುಂಬಾ ನೀರು ನಿಂತ ಕಾರಣ ಮಹಿಳೆ ಸೇರಿದಂತೆ ಊರಿನ ಜನರು ಶಾಸಕನನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಪ್ರತಿಕ್ರಿಯಿಸುತ್ತಾ “ನಾನು ಸರಿಯಾಗಿ ಕೆಲಸ ಮಾಡಿದ್ದರೆ ಅಣೆಕಟ್ಟು ಉಕ್ಕಿ ಹರಿಯುತ್ತಿರಲಿಲ್ಲ ಎಂದು ಮಹಿಳೆ ಹೇಳಿದರು. ನಾನು ಅವರಿಗೆ ಇದು ನೈಸರ್ಗಿಕ ವಿಕೋಪ ಮತ್ತು ಕಳೆದ ಕೆಲವು ದಿನಳಿಂದ ಭಾರೀ ಮಳೆಯಾಗಿದೆ ಎಂದು ವಿವರಿಸಿದ್ದರೂ ಆಕೆ ಕೇಳುವ ಸ್ಥಿತಿಯ್ಲಲಿರಲಿಲ್ಲ” ಎಂದು ಸಿಂಗ್ ಹೇಳಿದರು.

ಆದರೆ ಮಹಿಳೆಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತೆ ತಾನು ಹೇಳಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಇತ್ತೀಚೆಗೆ ಸುರಿದ ಬಾರಿ ಮಳೆಯ ನಂತರ ಉಕ್ಕಿ ಹರಿಯುತ್ತಿರುವ ಘಗ್ಗರ್ ನದಿಯಿಂದ ಪಂಜಾಬ್ ಮತ್ತು ಹರಿಯಾಣದ ಹಲವಾರು ಗ್ರಾಮಗಳು ಬಾಧಿತವಾಗಿವೆ.

ಎರಡು ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಹಲವು ಭಾಗಗಳು ಜಲಾವೃತಗೊಂಡಿರುವುದರಿಂದ ಎರಡು ರಾಜ್ಯಗಳಲ್ಲಿ ಪರಿಹಾರ ಕ್ರಮಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ.

ವಿಷಯಗಳು: #kannada #news #peepal #peepalmedia #politics
P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version