ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಆಂಧ್ರದಲ್ಲಿಂದು ವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಆಂಧ್ರದಲ್ಲಿಂದು ವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ

ವಿಜಯವಾಡ : ಇದೇ ಶುಕ್ರವಾರ ಸಂಜೆ ವಿಜಯವಾಡ ನಗರದ ಹೃದಯಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಆಂಧ್ರ ಸಿಎಂ ವೈಎಸ್ ಜಗನ್ ಅನಾವರಣಗೊಳಿಸಲಿದ್ದಾರೆ. ಇದು ವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಎಂದು ಆಂಧ್ರ ಸರ್ಕಾರ ಹೇಳಿದೆ. ಅಂಬೇಡ್ಕರ್ ಪ್ರತಿಮೆಯ ಎತ್ತರ 125 ಅಡಿ ಮತ್ತು ಪೀಠದ (ಪ್ರತಿಮೆಯ ತಳ) ಎತ್ತರ 85 ಅಡಿ. ಇವೆರಡನ್ನು ಸೇರಿಸಿದರೆ ಮೂರ್ತಿಯ ಒಟ್ಟು ಎತ್ತರ 210 ಅಡಿ. ಈ ಪ್ರತಿಮೆಗೆ ಸಾಮಾಜಿಕ ನ್ಯಾಯದ ಪ್ರತಿಮೆ ಎಂದು ಹೆಸರಿಡಲಾಗಿದೆ.

ಅಂಬೇಡ್ಕರ್ ಪ್ರತಿಮೆ ಜತೆಗೆ ಸ್ವರಾಜ್ ಮೈದಾನದಲ್ಲಿ ಸುಮಾರು 19 ಎಕರೆ ಪ್ರದೇಶದಲ್ಲಿ ಸ್ಮಾರಕವನ್ನೂ ನಿರ್ಮಿಸಲಾಗಿದೆ. ಸ್ಮಾರಕದಲ್ಲಿ ಅಂಬೇಡ್ಕರ್ ಅವರ ಜೀವನ ವೈಶಿಷ್ಟ್ಯಗಳು ಮತ್ತು ಶಿಲ್ಪಗಳ ಜೊತೆಗೆ ಅವರ ಫೋಟೋ ಗ್ಯಾಲರಿಯನ್ನು ಸ್ಥಾಪಿಸಲಾಗಿದೆ. ಇದು ಕನ್ವೆನ್ಷನ್ ಹಾಲ್ ಮತ್ತು ಫುಡ್ ಕೋರ್ಟ್ ಅನ್ನು ಸಹ ಒಳಗೊಂಡಿದೆ. ಇದು ಅತಿದೊಡ್ಡ ಪ್ರವಾಸಿ ತಾಣವಾಗಲಿದೆ ಎಂದು ಸರ್ಕಾರ ಅಭಿಪ್ರಾಯ ಪಟ್ಟಿದೆ ಎನ್ನಲಾಗುತ್ತಿದೆ.

ಪ್ರತಿಮೆಯ ತಳದ ಕೆಳಗೆ ಮೂರು ಅಂತಸ್ತುಗಳಿವೆ. ನೆಲಮಹಡಿಯಲ್ಲಿ ನಾಲ್ಕು ಸಭಾಂಗಣಗಳನ್ನು ವ್ಯವಸ್ಥೆಗೊಳಿಸಲಾಗಿದ್ದು, ಪ್ರತಿಯೊಂದೂ 4 ಸಾವಿರ ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಈ ನಾಲ್ಕರಲ್ಲಿ ಒಂದು ಸಿನಿಮಾ ಹಾಲ್, ಉಳಿದ ಮೂರರಲ್ಲಿ ಅಂಬೇಡ್ಕರ್ ಇತಿಹಾಸ ಹೇಳುವ ಡಿಜಿಟಲ್ ಮ್ಯೂಸಿಯಂ ಇದೆ. ಮೊದಲ ಮಹಡಿಯಲ್ಲಿ ನಾಲ್ಕು ಸಭಾಂಗಣಗಳು ಮತ್ತು ಎರಡನೇ ಮಹಡಿಯಲ್ಲಿ ನಾಲ್ಕು ಸಭಾಂಗಣಗಳು ಇರುತ್ತವೆ. ಈ ಪ್ರತಿಮೆಯ ತಯಾರಿ ಮತ್ತು ಸ್ಮಾರಕ ಸ್ಥಾಪನೆಗೆ ಸುಮಾರು 400 ಕೋಟಿ ರೂ ವೆಚ್ಚ ಮಾಡಿರುವುದಾಗಿ ಆಂದ್ರ ಪ್ರದೇಶ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಏಪ್ರಿಲ್ ನಲ್ಲಿ ಅಂದಿನ ಸಿಎಂ ಕೆಸಿಆರ್ ಅವರು ಹೈದರಾಬಾದ್ ನಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದರು. 125 ಅಡಿ ಎತ್ತರದ ಈ ಪ್ರತಿಮೆಗೆ ತೆಲಂಗಾಣ ಸರ್ಕಾರ ರೂ.146 ಕೋಟಿ ವೆಚ್ಚ ಮಾಡಿತ್ತು. ಟ್ಯಾಂಕ್ ಬಂಡ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಎತ್ತರ 125 ಅಡಿ. ನೆಲಮಾಳಿಗೆಯ ಎತ್ತರ 50 ಅಡಿ. ಎನ್‌ಟಿಆರ್‌ ಗಾರ್ಡನ್‌ ಪಕ್ಕದ 11.4 ಎಕರೆ ಪ್ರದೇಶದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಪ್ರತಿಮೆಯ ನೆಲಮಾಳಿಗೆಯಲ್ಲಿ ವಸ್ತುಸಂಗ್ರಹಾಲಯ, ಗ್ರಂಥಾಲಯ ಮತ್ತು ಸಮ್ಮೇಳನ ಸಭಾಂಗಣವನ್ನು ಒಳಗೊಂಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು