ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಳೆ ಮುನ್ಸೂಚನೆ ; 22 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಳೆ ಮುನ್ಸೂಚನೆ ; 22 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಚಟುವಟಿಕೆ ಇನ್ನೂ ಕಡಿಮೆಯಾಗದೇ ಮುಂದುವರಿಯುವ ಸೂಚನೆಗಳು ಕಂಡುಬಂದಿವೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಮಳೆ ಇಂದೂ ಮುಂದುವರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 22 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ತಂಪಾದ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.

ಯೆಲ್ಲೋ ಅಲರ್ಟ್ ಜಾರಿಗೊಂಡಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆ ಚಟುವಟಿಕೆ ಮುಂದುವರಿಯಲಿದೆ.

ಇದೇ ರೀತಿ ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ವಿಶೇಷವಾಗಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯ ಎಚ್ಚರಿಕೆ ನೀಡಲಾಗಿದ್ದು, ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್‌ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಉಳಿದ ಕೆಲವು ಭಾಗಗಳಲ್ಲಿ ಹವಾಮಾನವು ಸಾಮಾನ್ಯವಾಗಿ ಒಣವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು