ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಪಾಪಿ’ ಪಾಕಿಸ್ತಾನ ಮತ್ತಷ್ಟು ಚೂರಾಗಲಿದೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್

PPeepal Media

Peepal Media ದೇಶ

• 1 ನಿಮಿಷದ ಓದು

‘ಪಾಪಿ’ ಪಾಕಿಸ್ತಾನ ಮತ್ತಷ್ಟು ಚೂರಾಗಲಿದೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಲಖಿಂಪುರ ಖೇರಿ: ಪಾಕಿಸ್ತಾನವನ್ನು ‘ಪಾಪಿ’ ಎಂದು ಬಣ್ಣಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆ ದೇಶವು ಮುಂದಿನ ದಿನಗಳಲ್ಲಿ ಮತ್ತಷ್ಟು ಹೋಳಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಶನಿವಾರ ಮಿಯಾಂಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, 1947ರ ವಿಭಜನೆ ಮತ್ತು 1971ರ ಯುದ್ಧದ ಸಂದರ್ಭದಲ್ಲಿ ಬಾಂಗ್ಲಾದೇಶದಿಂದ ಸ್ಥಳಾಂತರಗೊಂಡು ದಶಕಗಳಿಂದ ಇಲ್ಲಿ ನೆಲೆಸಿದ್ದ ಸಾವಿರಕ್ಕೂ ಹೆಚ್ಚು ಹಿಂದೂ ಕುಟುಂಬಗಳಿಗೆ ಭೂಮಿಯ ಮಾಲೀಕತ್ವದ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು. ಭಾರತವನ್ನು ವಿಭಜಿಸಿದ ಪಾಪಿ ಪಾಕಿಸ್ತಾನವು ಈಗಾಗಲೇ ಇಬ್ಬಾಗವಾಗಿದೆ ಮತ್ತು ಅಲ್ಲಿ ಇತರ ಧರ್ಮಗಳಿಗೆ ಸ್ಥಾನವಿಲ್ಲದ ಕಾರಣ ಅಲ್ಪಸಂಖ್ಯಾತರು ತೀವ್ರ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಿಎಂ ಯೋಗಿ ಅವರು ಮಿಯಾಂಪುರ ಗ್ರಾಮವನ್ನು ‘ರವೀಂದ್ರ ನಗರ’ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, “ಕಾಂಗ್ರೆಸ್ ದಶಕಗಳ ಕಾಲ ನಿಮ್ಮ ಮತಗಳನ್ನು ಪಡೆದುಕೊಂಡರೂ ನಿಮಗೆ ಭೂಮಿಯ ಹಕ್ಕನ್ನು ನೀಡಲಿಲ್ಲ. ನಿಮ್ಮ ಅಸ್ಮಿತೆಯನ್ನು ಮರೆಮಾಚಲು ಈ ಗ್ರಾಮದಲ್ಲಿ ಒಬ್ಬನೇ ಒಬ್ಬ ‘ಮಿಯಾಂ’ ಇಲ್ಲದಿದ್ದರೂ ಇದಕ್ಕೆ ‘ಮಿಯಾಂಪುರ’ ಎಂದು ಹೆಸರಿಟ್ಟಿತ್ತು. ಇನ್ನು ಮುಂದೆ ರಾಷ್ಟ್ರಗೀತೆಯನ್ನು ಬರೆದ ರವೀಂದ್ರನಾಥ ಟ್ಯಾಗೋರ್ ಅವರ ಹೆಸರಿನಲ್ಲಿ ಈ ಗ್ರಾಮ ಗುರುತಿಸಿಕೊಳ್ಳಲಿದೆ” ಎಂದು ಹೇಳಿದರು. ಬಂಗಾಳದ ಭೂಮಿಯು ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ತಾಣವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಬಣ್ಣಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’ ಮಂತ್ರದ ಅಡಿಯಲ್ಲಿ ಈ ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ ಯೋಗಿ, ಲಖಿಂಪುರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಂದಾಜು 417 ಕೋಟಿ ರೂಪಾಯಿ ಮೊತ್ತದ 213 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬಂಕಿಮ ಚಂದ್ರ ಚಟರ್ಜಿ ಅವರು ಬರೆದ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನು ನೆನಪಿಸಿದ ಅವರು, ದಶಕಗಳ ಕನಸನ್ನು ನನಸು ಮಾಡಲು ತಾವು ಇಲ್ಲಿಗೆ ಬಂದಿರುವುದಾಗಿ ಹೇಳಿದರು. ಇದೇ ವೇಳೆ ಪ್ರಯಾಗ್‌ರಾಜ್‌ನ ಮಘ ಮೇಳದಲ್ಲಿ ಸಾಧು-ಸಂತರು ಯೋಗಿ ಆದಿತ್ಯನಾಥ್ ಅವರನ್ನು ಭವಿಷ್ಯದ ಪ್ರಧಾನಿ ಎಂದು ಹರಸಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು