Thursday, June 13, 2024

ಸತ್ಯ | ನ್ಯಾಯ |ಧರ್ಮ

ಆಗಸ್ಟ್ 15 ರಂದು ಐರ್ಲೆಂಡ್‌ಗೆ ಹೋಗಲಿದೆ ಟೀಂ ಇಂಡಿಯಾ… ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ.. ಲೈವ್‌ ನೋಡೋದು ಎಲ್ಲಿ?

ಐರ್ಲೆಂಡ್ ವಿರುದ್ಧ ಭಾರತವು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಮೊದಲ ಟಿ20 ಪಂದ್ಯ ಆಗಸ್ಟ್ 18ರಂದು ನಡೆದರೆ, ಎರಡನೇ ಪಂದ್ಯ ಆಗಸ್ಟ್ 20 ರಂದು ನಡೆಯಲಿದೆ.

ಹಾಗೂ ಕೊನೆಯ ಮತ್ತು 3ನೇ ಪಂದ್ಯ ಆಗಸ್ಟ್ 22ರಂದು ನಡೆಯಲಿದೆ. ಡಬ್ಲಿನ್‌ನಲ್ಲಿರುವ ಮಲಾಹಿಡೆ ಕ್ರಿಕೆಟ್ ಸ್ಟೇಡಿಯಂ ಈ ಎಲ್ಲಾ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಐರ್ಲೆಂಡ್ ವಿರುದ್ಧದ ಈ ಟಿ20 ಸರಣಿಗೆ ಬಿಸಿಸಿಐ ಇನ್ನಷ್ಟು ಯುವ ಆಟಗಾರರನ್ನು ಆಯ್ಕೆ ಮಾಡಿದೆ.

ಭಾರತ ಕ್ರಿಕೆಟ್ ತಂಡದ ವೆಸ್ಟ್ ಇಂಡೀಸ್ ಪ್ರವಾಸ ಮುಗಿದಿದೆ. ಇಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆದ್ದ ಟೀಂ ಇಂಡಿಯಾ ಟಿ20 ಸರಣಿಯನ್ನು ಕಳೆದುಕೊಂಡಿತ್ತು. ಟಿ20 ಸರಣಿ ಸೋಲಿನಿಂದ ಒಂದಷ್ಟು ಪಾಠ ಕಲಿತಿರುವ ಭಾರತ ಯುವ ತಂಡ ಕೆರಿಬಿಯನ್ ಪ್ರವಾಸ ಮುಗಿಸಿದೆ. ಇದೀಗ ಭಾರತೀಯ ಕ್ರಿಕೆಟ್ ತಂಡ ಐರ್ಲೆಂಡ್‌ಗೆ ತೆರಳಲು ಸಿದ್ಧವಾಗಿದೆ.

ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ನಾಳೆ, ಆಗಸ್ಟ್ 15, ಸ್ವಾತಂತ್ರ್ಯ ದಿನದಂದು ಟೀಮ್ ಇಂಡಿಯಾ ಐರ್ಲೆಂಡ್‌ಗೆ ಪ್ರಯಾಣಿಸಲಿದೆ. ವೇಗಿ ಜಸ್ಪ್ರೀತ್ ಬುಮ್ರಾ ನೇತೃತ್ವದಲ್ಲಿ ಭಾರತ ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಐ ಸರಣಿಯನ್ನು ಆಡಲಿದೆ.

ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿ ಆಗಸ್ಟ್ 18ರಿಂದ ಆರಂಭವಾಗಲಿದೆ. ಈ ಉದ್ದೇಶಕ್ಕಾಗಿ ಟೀಂ ಇಂಡಿಯಾ ಆಗಸ್ಟ್ 15ರಂದು ಡಬ್ಲಿನ್‌ಗೆ ಹೋಗಲಿದೆ. ಈ ಟೂರ್ನಿಯಲ್ಲಿ ಭಾರತದ ಹಿರಿಯ ಆಟಗಾರರು ಹಾಗೂ ಕೋಚಿಂಗ್ ಸಿಬ್ಬಂದಿಗೆ ವಿಶ್ರಾಂತಿ ನೀಡಲಾಗಿದೆ.

ಐರ್ಲೆಂಡ್ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಮೊದಲ ಟಿ20 ಪಂದ್ಯ ಆಗಸ್ಟ್ 18 ರಂದು ನಡೆದರೆ, ಎರಡನೇ ಪಂದ್ಯ ಆಗಸ್ಟ್ 20 ರಂದು ನಡೆಯಲಿದೆ. 3ನೇ ಪಂದ್ಯ ಆಗಸ್ಟ್ 22ರಂದು ನಡೆಯಲಿದೆ. ಡಬ್ಲಿನ್‌ನಲ್ಲಿರುವ ಮಲಾಹಿಡೆ ಕ್ರಿಕೆಟ್ ಸ್ಟೇಡಿಯಂ ಈ ಎಲ್ಲಾ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಭಾರತ ಮತ್ತು ಐರ್ಲೆಂಡ್ ನಡುವಿನ T20 ಸರಣಿಯು 7:30 PM IST ಕ್ಕೆ ಪ್ರಾರಂಭವಾಗಲಿದೆ. Viacom 18 ನೇರ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಸ್ಪೋರ್ಟ್ 18 ನಲ್ಲಿ ಲೈವ್ ವೀಕ್ಷಿಸಬಹುದು.
ಮತ್ತು ಜಿಯೋ ಸ್ಟ್ರೀಮಿಂಗ್ ಹೊಂದಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಇನ್ನಷ್ಟು ಯುವ ಆಟಗಾರರನ್ನು ಆಯ್ಕೆ ಮಾಡಿದೆ. ರುತುರಾಜ್ ಗಾಯಕ್ವಾಡ್ ಅವರಿಗೆ ಉಪನಾಯಕತ್ವ ನೀಡಲಾಗಿದೆ. ಪ್ರಸಿದ್ಧ್ ಕೃಷ್ಣ ಮತ್ತು ಶಿವಂ ದುಬೆ ತಂಡಕ್ಕೆ ಮರಳಿದರೆ, ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾಗೆ ಅವಕಾಶ ಸಿಕ್ಕಿತು. ಮುಂಬರುವ ಏಷ್ಯಾ ಕಪ್, ಐಸಿಸಿ ಏಕದಿನ ವಿಶ್ವಕಪ್‌ಗೆ ತಂಡವನ್ನು ಕಟ್ಟಲು ಇದು ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ಟಿ20 ತಂಡ: ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಶಾಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ವಾಷಿಂಗ್ಟನ್ ಸುಂದರ್ ಸುಂದರ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.

ಐರ್ಲೆಂಡ್ T20 ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಲ್ಬಿರ್ನಿ, ರಾಸ್ ಅಡೈರ್, ಲೋರ್ಕನ್ ಟಕರ್, ಹ್ಯಾರಿ ಟಕರ್, ಕರ್ಟಿಸ್ ಕಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವೈಟ್ ವ್ಯಾನ್ ವರ್ಕ್‌ಹ್ಯಾಮ್ .

Related Articles

ಇತ್ತೀಚಿನ ಸುದ್ದಿಗಳು