Friday, June 28, 2024

ಸತ್ಯ | ನ್ಯಾಯ |ಧರ್ಮ

ಆದಷ್ಟೂ ಹೊರಗೆ ಓಡಾಡದಿರಿ, ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ವಿದೇಶಾಂಗ ಸಚಿವಾಲಯ ಎಚ್ಚರಿಕೆ

ಕೆನಡಾದ ಸಂಸತ್ತಿನಲ್ಲಿ ಭಾರತದ ವಿರುದ್ಧ ಕೆನಡಾದ ಪ್ರಧಾನಿ ಕಟುವಾದ ಕಾಮೆಂಟ್‌ಗಳು ಎರಡೂ ದೇಶಗಳಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಸೃಷ್ಟಿಸುತ್ತಿರುವಂತೆ ಕಾಣುತ್ತಿದೆ.

ಕೆನಡಾದ ಕ್ರಮಗಳಿಗೆ ಭಾರತ ತೀವ್ರವಾಗಿ ಪ್ರತಿಕ್ರಿಯಿಸುತ್ತಿದೆ. ಕೆನಡಾದಲ್ಲಿ ನೆಲೆಸಿರುವ ಭಾರತೀಯರಿಗೆ ಭಾರತ ಪ್ರವಾಸ ಸಲಹೆಯನ್ನು ನೀಡಿದೆ. ಹಿಂಸಾತ್ಮಕ ಪ್ರದೇಶಗಳಿಗೆ ಹೋಗಬೇಡಿ ಎಂದು ಎಚ್ಚರಿಸಿದೆ.

ಕೆನಡಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ದೃಷ್ಟಿಯಿಂದ, ಭಾರತವು ಕೆನಡಾದಲ್ಲಿ ವಾಸಿಸುವ ಭಾರತೀಯ ನಾಗರಿಕರಿಗೆ ಪ್ರಯಾಣ ಸಲಹೆಯನ್ನು ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಈ ಸಲಹೆಯಲ್ಲಿ ಕೆನಡಾದಲ್ಲಿರುವ ಭಾರತೀಯ ನಾಗರಿಕರು ಮತ್ತು ಕೆನಡಾಕ್ಕೆ ಪ್ರಯಾಣಿಸಲು ಬಯಸುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.ಇತ್ತೀಚೆಗೆ ಭಾರತೀಯ ರಾಜತಾಂತ್ರಿಕರು ಮತ್ತು ಭಾರತೀಯರ ವಿಭಾಗಗಳನ್ನು ಗುರಿಯಾಗಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಎಚ್ಚರಿಸಿದೆ. ಆದ್ದರಿಂದ ಕೆನಡಾದಲ್ಲಿ ಇಂತಹ ಘಟನೆಗಳು ನಡೆದಿರುವ ಸ್ಥಳಗಳಿಗೆ ಮತ್ತು ಹಿಂಸಾಚಾರ ನಡೆದ ಸ್ಥಳಗಳಿಗೆ ಪ್ರಯಾಣಿಸುವುದನ್ನು ತಪ್ಪಿಸಲು ಭಾರತೀಯ ನಾಗರಿಕರಿಗೆ ಸೂಚಿಸಲಾಗಿದೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ತಮ್ಮ ದೇಶದ ಸಂಸತ್ತಿನಲ್ಲಿ ಭಾರತದ ವಿರುದ್ಧ ಹೇಳಿಕೆ ನೀಡಿದ್ದರು. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಟ್ರೂಡೊ ಆರೋಪಿಸಿದ್ದಾರೆ. ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ನಿಜ್ಜರ್ ಗೌರವಾನ್ವಿತ ಕೆನಡಾದ ಪ್ರಜೆ ಎಂದು ಟ್ರುಡೊ ಬಣ್ಣಿಸಿದ್ದಾರೆ. ಅಲ್ಲದೆ, ಭಾರತದ ಉನ್ನತ ರಾಜತಾಂತ್ರಿಕರನ್ನು ಕೆನಡಾದಿಂದ ಹೊರಹಾಕಲಾಗಿದ್ದು, ಈ ವಿಷಯದ ಬಗ್ಗೆ ತನಿಖೆ ಬಾಕಿ ಇದೆ. ಟ್ರುಡೊ ಅವರ ಆರೋಪವನ್ನು ಭಾರತ ತಳ್ಳಿಹಾಕಿದ್ದು, ಇದು ಸುಳ್ಳು ಮತ್ತು ಆಧಾರರಹಿತ ಎಂದು ಹೇಳಿದೆ.

ಟ್ರೂಡೊ ಕೆನಡಾದ ನೆಲದಿಂದ ಭಾರತ ವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪವೂ ಇದೆ. ಅದು ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಭಾರತವು ಕೆನಡಾದ ರಾಜತಾಂತ್ರಿಕರಿಗೆ 5 ದಿನಗಳಲ್ಲಿ ದೇಶವನ್ನು ತೊರೆಯುವಂತೆ ಆದೇಶಿಸಿದೆ. ಇದು ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಬಿಗುವನ್ನು ಹೆಚ್ಚಿಸಿದೆ.

ಈ ವರ್ಷ ಜೂನ್ 18 ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾದ ಗುರುದ್ವಾರದ ಹೊರಗೆ ನಿಜ್ಜರ್ ಎನ್ನುವವನನ್ನು ಗುಂಡಿಕ್ಕಿ ಕೊಲ್ಲಲಾಯಿತು. ಈ ಕೊಲೆಯನ್ನು ಭಾರತದ ಗೂಢಾಚಾರ ಸಂಸ್ಥೆಗೆ ಸೇರಿದವರು ಮಾಡಿದ್ದಾರೆ ಎನ್ನಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು