Friday, January 23, 2026

ಸತ್ಯ | ನ್ಯಾಯ |ಧರ್ಮ

ಇರಾನ್‌ನಿಂದ ತಾಯ್ನಾಡಿಗೆ ಮರಳಿದ ಭಾರತೀಯರು: ದೆಹಲಿಗೆ ಬಂದಿಳಿದ ಮೊದಲ ವಿಮಾನ

ಇರಾನ್‌ನಲ್ಲಿ ತೀವ್ರ ಪ್ರತಿಭಟನೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

ಈ ಕಾರ್ಯಾಚರಣೆಯ ಮೊದಲ ಹಂತವಾಗಿ, ಟೆಹ್ರಾನ್‌ನಿಂದ ಭಾರತೀಯರನ್ನು ಹೊತ್ತು ತಂದ ‘ಮಹಾನ್ ಏರ್’ ವಿಮಾನ (W5-071) ಇಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ತಮ್ಮ ಕುಟುಂಬದವರನ್ನು ಭೇಟಿಯಾದ ಪ್ರಯಾಣಿಕರು ಭಾವುಕರಾದ ದೃಶ್ಯಗಳು ಕಂಡುಬಂದವು. ಇರಾನ್‌ನಲ್ಲಿ ಪರಿಸ್ಥಿತಿ ಅತ್ಯಂತ ಹದಗೆಟ್ಟಿದ್ದು, ಇಂಟರ್ನೆಟ್ ಸೇವೆ ಸ್ಥಗಿತಗೊಂಡಿರುವುದರಿಂದ ಸಂಪರ್ಕ ಸಾಧಿಸಲು ಸಾಧ್ಯವಾಗದೆ ಪರದಾಡುವಂತಾಗಿದೆ ಎಂದು ಮರಳಿದ ಪ್ರಯಾಣಿಕರು ಅಲ್ಲಿನ ವಾಸ್ತವ ಸ್ಥಿತಿಯನ್ನು ವಿವರಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page