ಇಂದು ಸಂಜೆ ಭಟ್ಕಳಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಕಾರವಾರ:  ಸೋಮುವಾರ ಸುರಿದ ಬಾರಿ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಹ ಪೀಡಿತ ಪ್ರದೇಶ ಭಟ್ಕಳಕ್ಕೆ ಇಂದು (ಬುಧವಾರ) ಸಂಜೆ  ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ  ಭೇಟಿ ನೀಡಲಿದ್ದಾರೆ.

ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ   ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಹಿಂದೆಂದೂ ಕಂಡು ಕಾಣರಿಯದ ಪ್ರವಾಹಕ್ಕೆ ತುತ್ತಾಗಿದೆ. ಭಟ್ಕಳದ ಪಟ್ಟಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹವಾಮಾನ ಇಲಾಖೆ ಪ್ರಕಾರ 52 ಸೆಂ.ಮೀ ಮಳೆಯಾಗಿದ್ದು ಪ್ರವಾಹ ಪೀಡಿತ ಪ್ರದೇಶಗಳನ್ನು ಸಿಎಂ ವೀಕ್ಷಿಸಿ ಮಳೆಹಾನಿ ಕುರಿತು ಅವಲೋಕನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್‌ ಕೂಡ ಜೊತೆಯಲ್ಲಿರಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು