Monday, July 28, 2025

ಸತ್ಯ | ನ್ಯಾಯ |ಧರ್ಮ

ಇನ್ನೂ ಮೂರು ದಿನ ಮುಂದುವರೆಯಲಿರುವ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಾದ್ಯಂತ ಮಳೆಯ ಆರ್ಭಟ ತೀವ್ರವಾಗಿದ್ದು, ಇನ್ನಷ್ಟು ಅವಾಂತರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಇನ್ನೂ ಮೂರು ದಿನಗಳು ಮಳೆಯ ಪ್ರಮಾಣ ಹೀಗೇ ಅಥವಾ ಇನ್ನೂ ತೀವ್ರವಾಗಿ ಇರಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ತನ್ನ ಆರ್ಭಟ ಮುಂದುವರೆಸಿದ್ದು, ನಗರ ಪ್ರದೇಶಗಳಲ್ಲಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರಿನ ಹರಿವು ಮುಂದುವರೆದಿದ್ದು ಮನೆಯೊಳಗಿನ ನೀರು ಹೊರ ಹಾಕುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಜನರು ಮನೆ ಬಿಟ್ಟು ಬೇರೆಡೆಗೆ ಸ್ಥಳಾಂತರ ಆದ ಬಗ್ಗೆಯೂ ವರದಿಯಾಗಿದೆ.

ನದಿ ಪಾತ್ರದ ಪ್ರದೇಶಗಳಲ್ಲಿನ ಜನರಿಗೆ ಸ್ಥಳೀಯ ಆಡಳಿತ ಎಚ್ಚರಿಕೆ ಕೊಟ್ಟಿದ್ದು, ಜನರು ಜಾಗ್ರತೆ ವಹಿಸಿಕೊಳ್ಳಬೇಕು ಅಥವಾ ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರ ಆಗಬೇಕು ಎಂದು ಮನವಿ ಮಾಡಿದೆ. ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು ಜಲಾಶಯಗಳ ಗೇಟ್ ಗಳನ್ನು ತೆರೆಯಲಾಗಿದೆ. ಅದರಂತೆ ಹಲವು ಭಾಗಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಹಲವಷ್ಟು ಘಟ್ಟ ಪ್ರದೇಶದ ಜಾಗಗಳಲ್ಲಿ ಗುಡ್ಡ ಕುಸಿದ ಬಗ್ಗೆಯೂ ವರದಿಯಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ರಸ್ತೆ ಮೇಲೆಯೇ ನದಿಯಂತೆ ನೀರು ಹರಿಯುತ್ತಲಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಡಕುಂಟಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದ್ದು ಸ್ಥಳೀಯ ಆಡಳಿತ ಇನ್ನಷ್ಟು ಜಾಗರೂಕರಾಗುವ ಅವಶ್ಯಕತೆಯಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page