Monday, July 28, 2025

ಸತ್ಯ | ನ್ಯಾಯ |ಧರ್ಮ

ಇನ್ನೂ ಮೂರು ದಿನ ಮಳೆ ಹೆಚ್ಚಾಗುವ ಮುನ್ಸೂಚನೆ!

ರಾಜ್ಯಾದ್ಯಂತ ರಣ ಭೀಕರ ಮಳೆ ಸಾಕೆನ್ನಿಸುವಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಇನ್ನೂ ಎರಡು ದಿನ ಮಳೆ ಇನ್ನೂ ಹೆಚ್ಚಾಗಿ ಇರಲಿದೆ ಎಂಬ ಬಗ್ಗೆ ಮಾಹಿತಿ ನೀಡಿದೆ. ಮುಂದಿನ 24 ಗಂಟೆಗೂ ಹೆಚ್ಚು ಕಾಲ ದಟ್ಟ ಮೋಡ ಹೊಂದಿದ್ದು ಮಳೆಯ ಪ್ರಮಾಣದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ.

ಅದರಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಹಾಸನ, ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗೆ ಹಳದಿ ಅಲರ್ಟ್ ಎಂದು ಹೇಳಲಾಗಿದೆ. ಈ ಜಿಲ್ಲೆಗಳ ಭಾಗದ ಜನರು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಇಲಾಖೆ ಮನವಿ ಮಾಡಿದೆ.

ರಾಜಧಾನಿ ಬೆಂಗಳೂರಿನಲ್ಲೂ ಸಹ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯ ಪ್ರಮಾಣ ಜಾಸ್ತಿ ಎಂದೇ ಹೇಳಲಾಗಿದೆ. ಈಗಾಗಲೇ ಮಳೆಯಿಂದ ತತ್ತರಿಸಿದ ಬೆಂಗಳೂರು ಇನ್ನು ಕನಿಷ್ಟ ಮೂರು ದಿನಗಳಿಗೂ ಮಳೆಯನ್ನು ಸಹಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಿದೆ.

ಇನ್ನುಳಿದಂತೆ ಯಾದಗಿರಿ, ವಿಜಯಪುರ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಜಾಸ್ತಿ ಆಗಲಿದೆ. ಇನ್ನು ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಮುಂದಿನ ಎರಡು ದಿನಗಳ ಮಳೆಗೆ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page