Home ಬೆಂಗಳೂರು  ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ – ಆಯುಕ್ತ ಮಹೇಶ್ವರ್ ರಾವ್

 ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ – ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು : ಗೌರಿ ಗಣೇಶ ಹಬ್ಬ (Ganesha festival) ಸನಿಹದಲ್ಲಿರುವ ಕಾರಣ, ಈಗಾಗಲೇ ಗಣಪನ ಮೂರ್ತಿಗಳಿಗೆ (Ganesha statue) ಆರ್ಡರ್ ಗಳು ಹೆಚ್ಚಾಗಿವೆ. ಪ್ರತಿ ಬಾರಿಯೂ ಹಲವಾರು ರೂಪಗಳಲ್ಲಿ ಗಣೇಶ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಈ ಬಾರಿಯೂ ಅದೇ ರೀತಿಯ ಡಿಮ್ಯಾಂಡ್ ಇದೆ. ಹೀಗಾಗಿ ಗಣೇಶ ಮೂರ್ತಿಗಳನ್ನು ಕೂರಿಸಿ, ಆದ್ರೆ ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು (Nature friendly) ಮಾತ್ರ ಪ್ರತಿಷ್ಠಾಪಿಸಿ ಗೌರಿ ಗಣೇಶ ಹಬ್ಬವನ್ನು ಆಚರಿಸುವಂತೆ ನಾಗರಿಕರಲ್ಲಿ ಅರಿವು ಮೂಡಿಸಲು ಬಿಬಿಎಂಪಿ (BBMP) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು (ಆ.5) ಗೌರಿ ಗಣೇಶೋತ್ಸವ ಹಬ್ಬ ಆಚರಣೆ ಕುರಿತು ಬೆಂಗಳೂರಿನ ಮಲ್ಲೇಶ್ವರಂ ನ ಐಪಿಪಿ ಕೇಂದ್ರದಲ್ಲಿ ಸಭೆ ನಡೆಸಲಾಯಿತು.ಈ ವೇಳೆ ಮಾತನಾಡಿದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ರವರು ,ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಹೀಗಾಗಿ ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರ ಮೇಲೆ ಕೇಸ್ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಲ್ಲಿ ಪ್ರತಿ ಬಾರಿ ನೂರಾರು ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತದೆ ಮತ್ತು ಅವುಗಳನ್ನು ನಗರದಲ್ಲಿ 40ಕ್ಕೂ ಹೆಚ್ಚು ಕೆರೆ ಹಾಗೂ ಕಲ್ಯಾಣಿಗಳಲ್ಲಿ ಮಾಡಲಾಗುತ್ತದೆ.ಈ ವೇಳೆ ಯಾವುದೇ ದುರಂತಗಳಿಗೆ ಆಸ್ಪದ ನೀಡದಂತೆ ಎಲ್ಲಾ ಸ್ಥಳಗಳಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು, ಸ್ಥಳದಲ್ಲಿ ನುರಿತ ಈಜುಗಾರರು ಇರಬೇಕು,ಇನ್ನು ಅಗತ್ಯವಿರುವ ಕಡೆ ಕ್ರೇನ್‌ಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಹಬ್ಬದ ನಂತರ ಈ ವಿಸರ್ಜನಾ ಸ್ಥಳಗಳಲ್ಲಿ ಸಾಕಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ.ಹೀಗಾಗಿ ತ್ವರಿತವಾಗಿ ಈ ತ್ಯಾಜ್ಯವನ್ನು ತೆರವುಗೊಳಿಸಲು ಸ್ವಚ್ಛತಾ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಬೇಕು ಜೊತೆಗೆ ತ್ಯಾಜ್ಯ ಸಾಗಾಣೆ ವಾಹನಗಳ ವ್ಯವಸ್ಥೆ ಮಾಡಬೇಕು.ಇನ್ನು ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ,ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲು ಕೂಡ ಸೂಚನೆ ನೀಡಿದರು. ಇನ್ನುಳಿದಂತೆ ಸಾಕಷ್ಟು ಮನೆಗಳಲ್ಲಿ ಕೂಡ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಾರೆ.ಈ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ, ಸಂಬಂಧಪಟ್ಟ ಆಯಾ ವಾರ್ಡ್ ಗಳ ಪ್ರಮುಖ ಸ್ಥಳ ಹಾಗೂ ಜಂಕ್ಷನ್‌ಗಳಲ್ಲಿ ಮೊಬೈಲ್ ಟ್ಯಾಂಕ್ ಗಳನ್ನು ತಾತ್ಕಾಲಿವಾಗಿ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ.

You cannot copy content of this page

Exit mobile version