Home ಬ್ರೇಕಿಂಗ್ ಸುದ್ದಿ ಹಿಟ್ ಅಂಡ್ ರನ್ ಮಾಡಿ ಇಂಟಲಿಜೆನ್ಸ್ ಅಧಿಕಾರಿ ಕೊಲೆ

ಹಿಟ್ ಅಂಡ್ ರನ್ ಮಾಡಿ ಇಂಟಲಿಜೆನ್ಸ್ ಅಧಿಕಾರಿ ಕೊಲೆ

0

ಮೈಸೂರು: ನಿವೃತ್ತ ಇಂಟಲಿಜೆನ್ಸ್ ಅಧಿಕಾರಿಯ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿ, ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಶುಕ್ರವಾರ, ಮಾನಸಗಂಗೋತ್ರಿ ಆವರಣದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ (83) ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ನಂಬರ್ ಪ್ಲೇಟ್ ಇಲ್ಲದ ಕಾರೊಂದು ಉದ್ದೇಶಪೂರ್ವಕವಾಗಿ ರಸ್ತೆಯ ಬದಿಯಲ್ಲಿ ನಡೆಯುತ್ತಿದ್ದ ಕುಲಕರ್ಣಿ ಅವರಿಗೆ ಡಿಕ್ಕಿ ಹೊಡೆದಿರುವುದು ಬೆಳಕಿಗೆ ಬಂದಿದೆ.

ಆರೋಪಿಗಳ ಪತ್ತೆಗೆ ಎಸಿಪಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿದ್ದು,‌ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮೈಸೂರು ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

You cannot copy content of this page

Exit mobile version