Sunday, July 14, 2024

ಸತ್ಯ | ನ್ಯಾಯ |ಧರ್ಮ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಕೊರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರು ಅರವಿಂದ್ ಕೇಜ್ರಿವಾಲ್ ಅವರ ಇಡಿ ಬಂಧನವನ್ನು ಪ್ರಶ್ನಿಸಿ ಮಾಡಿದ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ಕಳುಹಿಸಿದ್ದಾರೆ.

ಜಾಮೀನು ಮಂಜೂರು ಮಾಡುವಾಗ ಸುಪ್ರೀಂಕೋರ್ಟ್ , “ಅರವಿಂದ್ ಕೇಜ್ರಿವಾಲ್ 90 ದಿನಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ. ಅವರು ಚುನಾಯಿತ ನಾಯಕರಾಗಿದ್ದಾರೆ ಮತ್ತು ಅವರು ಪಾತ್ರದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅವರಿಗೆ ಬಿಟ್ಟದ್ದು” ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು