Tuesday, March 3, 2026

ಸತ್ಯ | ನ್ಯಾಯ |ಧರ್ಮ

ಇರಾನ್ ದಾಳಿ: ಒಮನ್ ಕರಾವಳಿಯಲ್ಲಿ ಮೂವರು ಭಾರತೀಯ ನಾವಿಕರ ಸಾವು

ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಘರ್ಷಕ್ಕಿಳಿದಿರುವ ಇರಾನ್, ಒಮನ್ ಕರಾವಳಿ ಸಮೀಪದ ವಾಣಿಜ್ಯ ನೌಕೆಗಳ ಮೇಲೆ ಭೀಕರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತದ ಮೂವರು ನಾವಿಕರು ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಡಗು ಸಂಚಾರ ಮಹಾನಿರ್ದೇಶನಾಲಯ (DGS) ದೃಢಪಡಿಸಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ಹಡಗು ಆಪರೇಟರ್‌ಗಳಿಗೆ ತುರ್ತು ಎಚ್ಚರಿಕೆಯನ್ನು ನೀಡಲಾಗಿದ್ದು, ಗಲ್ಫ್ ಆಫ್ ಒಮನ್, ಹಾರ್ಮುಜ್ ಜಲಸಂಧಿ ಮತ್ತು ಪರ್ಷಿಯನ್ ಗಲ್ಫ್ ಪ್ರದೇಶಗಳಲ್ಲಿ ಪರಿಸ್ಥಿತಿ ಅತ್ಯಂತ ಆತಂಕಕಾರಿಯಾಗಿದೆ ಎಂದು ತಿಳಿಸಲಾಗಿದೆ. ಈ ಭಾಗದಲ್ಲಿ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನಡೆಯುವ ಸಾಧ್ಯತೆಗಳಿರುವುದರಿಂದ ಹಡಗುಗಳು ಹೆಚ್ಚಿನ ಜಾಗರೂಕತೆ ವಹಿಸಬೇಕು ಮತ್ತು ಯಾವುದೇ ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಬೇಕು ಎಂದು ಸೂಚಿಸಲಾಗಿದೆ.

ಗಾಯಗೊಂಡಿರುವ ಮತ್ತು ಸಂಕಷ್ಟದಲ್ಲಿರುವ ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಒಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಪರ್ಷಿಯನ್ ಗಲ್ಫ್ ಸಮೀಪ ಸಿಲುಕಿರುವ ನಾವಿಕರಿಗೆ ತಕ್ಷಣದ ನೆರವು ನೀಡಲು ಮತ್ತು ಅವರ ಕುಟುಂಬಗಳೊಂದಿಗೆ ಸಮನ್ವಯ ಸಾಧಿಸಲು ವಿಶೇಷ ಸ್ಪಂದನಾ ತಂಡವನ್ನು (Special Response Team) ರಚಿಸಲಾಗಿದೆ ಎಂದು ಹಡಗು ಸಂಚಾರ ಮಹಾನಿರ್ದೇಶಕ ಶ್ಯಾಮ್ ಜಗನ್ನಾಥನ್ ತಿಳಿಸಿದ್ದಾರೆ. ಪ್ರಸ್ತುತ ಭಾರತೀಯ ಧ್ವಜವಿರುವ ಯಾವುದೇ ನೌಕೆಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


Related Articles

ಇತ್ತೀಚಿನ ಸುದ್ದಿಗಳು

You cannot copy content of this page