Thursday, June 20, 2024

ಸತ್ಯ | ನ್ಯಾಯ |ಧರ್ಮ

ನಿಮ್ಮದು ಸೆಲೆಕ್ಟೆಡ್ ಸಂಸ್ಕೃತಿ ರಕ್ಷಣೆಯೇ?: ಸುನಿಲ್‌ ಕುಮಾರ್‌ ಕಾರ್ಕಳ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಡಾಲಿ ಧನಂಜಯ ಅಭಿನಯದ ಹೆಡ್‌ ಬುಷ್‌ ಸಿನಿಮಾದಲ್ಲಿ ಕನ್ನಡದ ಜನಪದ ನೃತ್ಯ ವೀರಗಾಸೆಗೆ ಅವಮಾನವಾಗಿದ್ದರೆ ಅಂತಹ ಆಂಶಗಳನ್ನು ಮರುಪರಿಶೀಲನೆ ಮಾಡಬೇಕು ಎಂಬ ಇಂಧನ ಸಚಿವ ಸುನಿಲ್‌ ಕುಮಾರ್‌ ಕಾರ್ಕಳ ಅವರ ಹೇಳಿಕೆಗೆ, ರಾಜ್ಯ ಕಾಂಗ್ರೆಸ್‌ ಘಟಕ ವಾಗ್ದಾಳಿ ನಡೆಸಿದೆ.

ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ಟೀಟ್‌ ಮಾಡಿದ್ದು, ಹೆಡ್ ಬುಷ್ ಚಿತ್ರದಲ್ಲಿ ಇಲ್ಲದ ವಿವಾದ ಕಣ್ಣಿಗೆ ಬೀಳುತ್ತಲೇ ಹೆಡೆ ಎತ್ತಿ ಬುಸ್ ಬುಸ್ ಎನ್ನಲು ಹೊರಟಿರುವ ಸುನಿಲ್ ಕುಮಾರ್ ಕಾರ್ಕಳ ಅವರೇ, ಪಠ್ಯಪುಸ್ತಕದಲ್ಲಿ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವಾದಾಗ ನಿಮ್ಮೊಳಗಿನ ಸಂಸ್ಕೃತಿ ವೀರ ಹೆಡೆ ಎತ್ತಲಿಲ್ಲವೇಕೆ? ನಿಮ್ಮದು ಸೆಲೆಕ್ಟೆಡ್ ಸಂಸ್ಕೃತಿ ರಕ್ಷಣೆಯೇ? ಎಂದು ಟೀಕಿಸಿದೆ.

ಕಾಂಗ್ರೆಸ್‌ ಟೀಕೆಗೆ ಕಾರಣವಾದ ಸುನಿಲ್ ಕುಮಾರ್ ಕಾರ್ಕಳರವರ ಟ್ವೀಟ್‌

ಹೆಡ್‌ ಬುಷ್‌ ಸಿನಿಮಾದ ವಾದ-ವಿವಾದದ ಬಗ್ಗೆ ಟ್ವೀಟ್‌ ಮಾಡಿದ್ದ ಸುನಿಲ್ ಕುಮಾರ್ ಕಾರ್ಕಳರವರು, ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ.

ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ, ಈ ಕುರಿತು ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ ಎಂದು ತಿಳಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು