ಬರ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ ಅಲ್ವಾ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರ(Drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಒತ್ತಾಯಿಸಿದರು. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ದೆಹಲಿಗೆ ತೆರಳುವುದಾಗಿ ಅವರು ತಿಳಿಸಿದರು.ಕರ್ನಾಟಕಕ್ಕೆ ನೆರವು ನೀಡುವುದು ಗೌರವಾನ್ವಿತ ಪ್ರಧಾನಮಂತ್ರಿಗಳ ಕರ್ತವ್ಯವಾಗಿದೆ. ಕರ್ನಾಟಕ ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಸಂಕಷ್ಟದಲ್ಲಿವೆ. ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ರೈತರು ಬೆಳೆ ಕಳೆದುಕೊಂಡಿದ್ದಾರೆ. ನೀರು ಮತ್ತು ವಿದ್ಯುತ್ ಸಮಸ್ಯೆಗಳೂ ಎದುರಾಗಿವೆ, ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸುಮಾರು 20,000 ಮೆಗಾವ್ಯಾಟ್‌ಗೆ ತಲುಪಿದ್ದು, ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಗಂಭೀರ ಪರಿಸ್ಥಿತಿ ಎದುರಾಗಿದೆ ಎಂದರು.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಾವು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ರಾಜ್ಯಗಳಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ ₹20ರಿಂದ ₹22ರವರೆಗೆ ಪಾವತಿಸಿ ಖರೀದಿಸುವ ಪರಿಸ್ಥಿತಿ ಇದೆ. ವಿದ್ಯುತ್ ಲಭ್ಯವಾಗುತ್ತಿಲ್ಲ ಎಂದು ನುಡಿದ ಅವರು, ವಿದ್ಯುತ್ ಪರಿಸ್ಥಿತಿಯನ್ನು ಪರಿಶೀಲಿಸಿ, ಗ್ರಾಹಕರ ಹಿತವನ್ನು ರಕ್ಷಿಸುವಂತೆ ಇಂಧನ ಇಲಾಖೆಗೆ ಸೂಚನೆ ನೀಡಿರುವುದಾಗಿ  ತಿಳಿಸಿದರು. ವಿದ್ಯುತ್ ಇಲಾಖೆಗೆ ಪರಿಸ್ಥಿತಿಯನ್ನು ಪರಿಶೀಲಿಸಿ, ನಾಗರಿಕರನ್ನು ರಕ್ಷಿಸುವಂತೆ ಸೂಚಿಸಿದ್ದೇನೆ, ಸಕ್ಕರೆ ಕಾರ್ಖಾನೆಗಳೊಂದಿಗೆ ಕೂಡ ಚರ್ಚಿಸಿದ್ದು, ವಿದ್ಯುತ್ ಪೂರೈಕೆ ವಿಚಾರದಲ್ಲಿ ಸರ್ಕಾರದೊಂದಿಗೆ ಸಹಕರಿಸುವಂತೆ ಸೂಚಿಸಿರುವುದಾಗಿ ಶಿವಕುಮಾರ್ ಹೇಳಿದರು. ಅಲ್ಲದೇ , “ಕೆಲವು ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳನ್ನು ಕರೆಸಿ ಚರ್ಚಿಸಿದ್ದೇನೆ. ಕೆಲವು ನಿರ್ಬಂಧಗಳನ್ನು ವಿಧಿಸುವ ಅಗತ್ಯವಿದೆ. ಅವರು ಉತ್ಪಾದಿಸುವ ವಿದ್ಯುತ್ ಅನ್ನು ಮಾರಾಟ ಮಾಡಲು ಸಾಧ್ಯವಿಲ್ಲ; ಅದನ್ನು ಸರ್ಕಾರಕ್ಕೆ ನೀಡಬೇಕು, ಉಷ್ಣ ವಿದ್ಯುತ್ ಸ್ಥಾವರಗಳಿಗೆ ಅಗತ್ಯವಿರುವ ಕಲ್ಲಿದ್ದಲು ದಾಸ್ತಾನು ಬಗ್ಗೆಯೂ ಎಚ್ಚರಿಕೆ ವಹಿಸಬೇಕಿದೆ ಎಂದು ಮುಖ್ಯಮಂತ್ರಿ ಹೇಳಿದರು.

“ಉಷ್ಣ ವಿದ್ಯುತ್ ಉತ್ಪಾದನೆಯಾಗುವ ಕಡೆಗಳಲ್ಲಿ ಕಲ್ಲಿದ್ದಲು ದಾಸ್ತಾನು ಎಷ್ಟಿದೆ ಎಂಬುದನ್ನು ಗಮನಿಸಬೇಕು. ಈ ವಿಚಾರದಲ್ಲಿ ನಾವು ಬಹಳ ಎಚ್ಚರಿಕೆಯಿಂದ ಇರಬೇಕು. ಇದು ಕರ್ನಾಟಕದ ಸಮಸ್ಯೆ ಮಾತ್ರವಲ್ಲ. ಇತರ ರಾಜ್ಯಗಳ ಪರಿಸ್ಥಿತಿಯನ್ನೂ ನಾನು ಗಮನಿಸುತ್ತಿದ್ದೇನೆ, ತಾವು ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಲಭ್ಯತೆಯನ್ನು ಪ್ರತಿದಿನವೂ ಗಮನಿಸುತ್ತಿದ್ದೆ ಎಂದು ಸಿಎಂ ನೆನೆಪಿಸಿಕೊಂಡರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಕುರಿತು ಮಾತನಾಡಿದ ಮುಖ್ಯಮಂತ್ರಿ, ಇದರ ನಂತರ ನಾನು ದೆಹಲಿಗೆ ತೆರಳುತ್ತೇನೆ. ಪ್ರಧಾನಿಯವರ ಭೇಟಿಗೆ ಸಮಯ ಕೇಳುತ್ತಿದ್ದೇನೆ,” ಎಂದು ಶಿವಕುಮಾರ್ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು