Home ವಿದೇಶ ಗಾಜಾ, ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; ಹಲವು ಪ್ಯಾಲೆಸ್ತೀನಿಯನ್ನರ ಸಾವು

ಗಾಜಾ, ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; ಹಲವು ಪ್ಯಾಲೆಸ್ತೀನಿಯನ್ನರ ಸಾವು

0

ಕದನ ವಿರಾಮ ಒಪ್ಪಂದವನ್ನು (ceasefire) ಉಲ್ಲಂಘಿಸಿ, ಇಸ್ರೇಲ್ ಪಡೆಗಳು ಮತ್ತೊಮ್ಮೆ ಪ್ಯಾಲೆಸ್ತೀನ್ ಮೇಲೆ ದಾಳಿಗಳನ್ನು (Israeli strikes) ನಡೆಸಿವೆ.

ಗಾಜಾ (Gaza) ನಗರವನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ. ಗಾಜಾ ಮತ್ತು ಖಾನ್ ಯೂನಿಸ್ ಮೇಲೆ ಕ್ಷಿಪಣಿಗಳ ಸುರಿಮಳೆ ಮಾಡಲಾಗಿದೆ. ಈ ದಾಳಿಗಳಲ್ಲಿ ಸುಮಾರು 25 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಮುಖ ಸುದ್ದಿ ಸಂಸ್ಥೆ ಅಲ್ ಜಜೀರಾ ವರದಿ ಮಾಡಿದೆ. ಸುಮಾರು 77 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಐಡಿಎಫ್ (IDF) ದಾಳಿಗಳು ಜನಸಂದಣಿ ಇರುವ ಪ್ರದೇಶಗಳಿಗೆ ಅಪ್ಪಳಿಸಿದ್ದರಿಂದ ಹೆಚ್ಚಿನ ಪ್ರಾಣಹಾನಿಯಾಗಿದೆ ಎಂದು ವರದಿ ಹೇಳಿದೆ. ಹಮಾಸ್ ಉಗ್ರರು ತಮ್ಮ ದೇಶದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಕಾರಣಕ್ಕಾಗಿಯೇ ನಾವು ದಾಳಿಗಳನ್ನು ಮಾಡಿದ್ದೇವೆ ಎಂದು ಇಸ್ರೇಲ್ ಮಿಲಿಟರಿ ಸ್ಪಷ್ಟಪಡಿಸಿದೆ.

ಇದೇ ವೇಳೆ, ಇಸ್ರೇಲ್ ಲೆಬನಾನ್ (Lebanon) ಮೇಲೂ ದಾಳಿಗಳನ್ನು ತೀವ್ರಗೊಳಿಸಿದೆ. ದಕ್ಷಿಣ ಲೆಬನಾನ್‌ನಲ್ಲಿರುವ ಪ್ಯಾಲೆಸ್ತೀನ್ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್‌ಗಳ ಸುರಿಮಳೆ ಮಾಡಿದೆ. ಈ ದಾಳಿಗಳಲ್ಲಿ 10 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲೆಬನೀಸ್ ಸಾರ್ವಜನಿಕ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ. ಹಮಾಸ್ ಮತ್ತು ಹಿಜ್ಬುಲ್ಲಾ ನೆಟ್‌ವರ್ಕ್‌ಗಳನ್ನೇ ಗುರಿಯಾಗಿಸಿಕೊಂಡು ಈ ವೈಮಾನಿಕ ಮತ್ತು ಡ್ರೋನ್ ದಾಳಿಗಳನ್ನು ನಡೆಸುತ್ತಿದ್ದೇವೆ ಎಂದು ಇಸ್ರೇಲ್ ಹೇಳಿದೆ.

ಆದರೆ, ಅಮೆರಿಕದ ಮಧ್ಯಸ್ಥಿಕೆಯಿಂದ ಜಾರಿಗೆ ಬಂದಿದ್ದ ಕದನ ವಿರಾಮವನ್ನು ಧಿಕ್ಕರಿಸಿ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದೆ. ಇಲ್ಲಿಯವರೆಗೆ ಒಟ್ಟು 393 ದಾಳಿಗಳನ್ನು ನಡೆಸಲಾಗಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಈ ದಾಳಿಗಳಲ್ಲಿ ಸುಮಾರು 280 ಜನರು ಸಾವನ್ನಪ್ಪಿದ್ದು, 672 ಜನರು ಗಾಯಗೊಂಡಿದ್ದಾರೆ.

You cannot copy content of this page

Exit mobile version