Home ಬೆಂಗಳೂರು ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ...

ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ ವಿ ಪ್ರಭಾಕರ್

0

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು.

ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌

“ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮೆಚ್ಚುಗೆ ಸೂಚಿಸಿದರು.

ಈ ವಾರ ಸಿನಿಮಾ ಜಗತ್ತಿಗೆ ಸಂಭ್ರಮದ ವಾರ. 2019 ನೇ ಸಾಲಿನ ರಾಜ್ಯ ಸಿನಿಮಾ ಪ್ರಶಸ್ತಿಗಳು ಹಾಗೂ ನೆನ್ನೆ ಅನಂತನಾಗ್ ಅವರೂ ಸೇರಿ ಸಿನಿಮಾ ಕ್ಷೇತ್ರದ ದಿಗ್ಗಜರಿಗೆ ಪದ್ಮ‌ ಪ್ರಶಸ್ತಿಗಳು ಲಭಿಸಿವೆ. ಇದು ಸಂಭ್ರಮದ ವಾರ ಎಂದರು.

ಐದು ವರ್ಷಗಳಿಂದ ರಾಜ್ಯ ಸಿನಿಮಾ ಪ್ರಶಸ್ತಿಗಳು ಸ್ಥಗಿತಗೊಂಡಿದ್ದವು. ನಾವು ಈಗಗಲೇ 2019 ರ ಪ್ರಶಸ್ತಿ ಘೋಷಣೆಯಾಗಿದ್ದು ಬಾಕಿ ಇರುವ ಐದೂ ವರ್ಷಗಳ ಪ್ರಶಸ್ತಿಯನ್ನೂ ಇದೇ ವರ್ಷ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದರು.

ಸಿನಿಮಾ PRO ಗಳಿಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.

ನಟಿ ಜಯಂತಿ ಅವರ ಹೆಸರಿನ ಪ್ರಶಸ್ತಿ ಸ್ಥಾಪಿಸಲು ಈಗಾಗಲೇ ಸರ್ಕಾರಿ ಆದೇಶ ಆಗಿದೆ ಎಂದು ತಿಳಿಸಿದರು.

ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಹಿರಿಯ ಪತ್ರಕರ್ತೆ ವಿಜಯಮ್ಮ, ಹಿರಿಯ ಪತ್ರಕರ್ತರಾದ ಸದಾಶಿವ ಶೆಣೈ, ನಿರ್ದೇಶಕರಾದ ಇಂದ್ರಜಿತ್ ಲಂಕೇಶ್, ನಟಿ ರಾಗಿಣಿ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಉಮೇಶ್ ಬಣಕಾರ್, ಸಂಜಯ್ ಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

You cannot copy content of this page

Exit mobile version