ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 30:ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ” ನಮ್ಮ ಸರ್ಕಾರ ಬಸವಣ್ಣನವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ” ಎಂದರು.

ನಂತರ ಮಾತನಾಡಿ “ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ” ಎಂದು ತಿಳಿಸಿ ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು