Monday, July 29, 2024

ಸತ್ಯ | ನ್ಯಾಯ |ಧರ್ಮ

ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ; ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಬಹಿರಂಗ

ರಾಜಸ್ತಾನದಿಂದ ತಂದ ನಾಯಿ ಮಾಂಸ ಎಂದು ಗಲಭೆ ಎಬ್ಬಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದ್ದು, ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ದೃಢಪಟ್ಟಿದೆ.

ವಿವಾದವಾಗುತ್ತಿದಂತೆ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಮಾಂಸವನ್ನು ವಶಕ್ಕೆ ಪಡೆದು ಅದರ ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿದ್ದರು. ಅದರ ಪರೀಕ್ಷೆ ನಡೆಸಿದ ಪ್ರಯೋಗಾಲಯದವರು ಅದು ಮೇಕೆ ಮಾಂಸ ಎಂದು ವರದಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿ ಗೂಂಡಾ ಪ್ರವೃತ್ತಿ ಮೆರೆದು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದ್ದ. ಶುಕ್ರವಾರ ಸಂಜೆಯ ವೇಳೆಗೆ ನಡೆದ ಈ ಘಟನೆ ಕೆಲವೇ ನಿಮಿಷಗಳಲ್ಲಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು.

ಪುನೀತ್ ಕೆರೆಹಳ್ಳಿಯ ಪುಂಡರ ತಂಡ ಮಾಂಸ ತುಂಬಿದ 90 ಬಾಕ್ಸ್‌ಗಳನ್ನು ತಡೆದಿದ್ದರು. ಇದರಿಂದ ಸ್ಥಳದಲ್ಲಿ ಮಾಂಸ ವ್ಯಾಪಾರಿ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಬಳಿಕ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ನೆಪದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದರು.

ನಾಯಿ ಮಾಂಸ ಸಾಗಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿರುವ ಪುನೀತ್ ಕೆರೆಹಳ್ಳಿಗೆ ನ್ಯಾಯಾಲಯವು ಶನಿವಾರ ೧೪ ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿತ್ತು. ಇದರಿಂದ ಪುನೀತ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು