Home ರಾಜ್ಯ ಧಾರವಾಡ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಪೂರ್ತಿಯಾಗಿ ಮರೆತಿದೆ: ಜಗದೀಶ್ ಶೆಟ್ಟರ್ ವಾಗ್ದಾಳಿ

ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಪೂರ್ತಿಯಾಗಿ ಮರೆತಿದೆ: ಜಗದೀಶ್ ಶೆಟ್ಟರ್ ವಾಗ್ದಾಳಿ

0

ಹುಬ್ಬಳ್ಳಿ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ವ್ಯಾಪಕ ಭ್ರಷ್ಟಾಚಾರ ಹಾಗೂ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಲಿಂಗಸುಗೂರಿನಿಂದ ಬಳ್ಳಾರಿಯವರೆಗೆ 10 ದಿನಗಳ ಬೃಹತ್ ಪಾದಯಾತ್ರೆ ಕೈಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಪ್ರತಿಯೊಂದು ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಮುಖ್ಯವಾಗಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯನ್ನು ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 50,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಉಳಿದಿದ್ದರೂ ಭರ್ತಿ ಮಾಡಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ನೀರಾವರಿ ಯೋಜನೆಗಳಿಗೆ ಯಾವುದೇ ಅಗತ್ಯ ಅನುದಾನ ಅಥವಾ ಅನುದಾನದ ಬಿಡುಗಡೆ ಮಾಡದೆ ರೈತರ ಹಿತಾಸಕ್ತಿಯನ್ನು ಬಲಿಕೊಡಲಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವು ಆಡಳಿತದ ಎಲ್ಲಾ ರಂಗಗಳಲ್ಲೂ ಸಂಪೂರ್ಣವಾಗಿ ವಿಫಲವಾಗಿದ್ದು, ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಹಣ ಒದಗಿಸುವ ‘ಎಟಿಎಂ’ ಆಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಸಿಬಿಐ, ಇ.ಡಿ ಹಾಗೂ ಲೋಕಾಯುಕ್ತದಲ್ಲಿ 26ಕ್ಕೂ ಹೆಚ್ಚು ಪ್ರಕರಣಗಳು ತನಿಖೆಯಲ್ಲಿದ್ದರೂ, ಯಾವುದೇ ಬಿ-ರಿಪೋರ್ಟ್ ಅಥವಾ ಕ್ಲೀನ್ ಚಿಟ್ ಇಲ್ಲದಿದ್ದರೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ತಂತ್ರಗಾರಿಕೆಯಿಂದಾಗಿ ಬೆಳವಣಿಗೆಗಳು ನಡೆಯುತ್ತಿವೆ ಎಂದು ಟೀಕಿಸಿದರು. ಮುಂಬರುವ ದಿನಗಳಲ್ಲಿ ಸಂಪುಟದ ಹಲವು ವಿಕೆಟ್‌ಗಳು ಉರುಳಲಿವೆ ಎಂದ ಅವರು, ಈ ಪಾದಯಾತ್ರೆಯು ಯಾವುದೇ ರಾಜಕೀಯ ಲಾಭಕ್ಕಾಗಿ ಅಲ್ಲ, ಬದಲಾಗಿ ಜನಸಾಮಾನ್ಯರ ಹಿತದೃಷ್ಟಿಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

You cannot copy content of this page

Exit mobile version