Home ದೇಶ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ

0

ಮಹತ್ವದ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವೈದ್ಯಕೀಯ ಸಲಹೆ ಮೇರೆಗೆ ಅನಾರೋಗ್ಯದ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಸಂವಿಧಾನದ 67(a) ವಿಧಿಯ ಅನ್ವಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಜಗದೀಪ್ ಧನಕರ್ ತಿಳಿಸಿದ್ದಾರೆ. ʼʼಈ ಅವಧಿಯಲ್ಲಿ ಭಾರತದ ಗಮನಾರ್ಹ ಆರ್ಥಿಕ ಪ್ರಗತಿಗೆ ಸಾಕ್ಷಿಯಾಗಿರುವುದು ತೃಪ್ತಿ ತಂದಿದೆʼʼ ಎಂದು 74 ವರ್ಷದ ಧನಕರ್‌ ಹೇಳಿದ್ದಾರೆ.

“ತನ್ನ ಅಧಿಕಾರಾವಧಿಯಲ್ಲಿ ತಮ್ಮ ಕೆಲಸಕ್ಕೆ ಸಂಪೂರ್ಣ ಸಹಕಾರ ನೀಡಿದ ಪ್ರಧಾನ ಮಂತ್ರಿ ಮತ್ತು ಮಂತ್ರಿ ಮಂಡಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಪ್ರಧಾನ ಮಂತ್ರಿ ಅವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು ಮತ್ತು ನಾನು ನನ್ನ ಅಧಿಕಾರಾವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆʼʼ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಹೃದಯ ಸಂಬಂಧಿ ಕಾಯಿಲೆ ಕಂಡುಬಂದ ಹಿನ್ನೆಲೆಯಲ್ಲಿ ಅವರು ಈ ವರ್ಷದ ಮಾರ್ಚ್‌ನಲ್ಲಿ 4 ದಿನಗಳ ಕಾಲ ದೆಹಲಿ ಏಮ್ಸ್‌ಗೆ ದಾಖಲಾಗಿದ್ದರು.

ಉಪರಾಷ್ಟ್ರಪತಿಗಳು ರಾಜ್ಯಸಭೆಯ ಅಧ್ಯಕ್ಷರೂ ಆಗಿರುವಾಗ ಮುಂದಿನ 60 ದಿನಗಳ ಒಳಗಾಗಿ ಹೊಸ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಬೇಕಿದೆ. ಹೀಗಾಗಿ ಸಂಸತ್ತಿನ ಎರಡೂ ಸದನಗಳ ಎಲ್ಲ ಸದಸ್ಯರ ಸಮ್ಮುಖದಲ್ಲಿ ಉಪರಾಷ್ಟ್ರಪತಿಯ ನೇಮಕ ನಡೆಯಲಿದೆ. ಸಂವಿಧಾನದ ಪ್ರಕಾರ ಉಪರಾಷ್ಟ್ರಪತಿ ಹುದ್ದೆ ತೆರವಾದ ಬಳಿಕ ರಾಜ್ಯಸಭೆಯ ಉಪಸಭಾಪತಿ ಮೇಲ್ಮನೆಯ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

You cannot copy content of this page

Exit mobile version