Home ರಾಜಕೀಯ ಮತ್ತೆ ಬಿಜೆಪಿಗೆ ಸೇರಿದ ಜಗದೀಶ್‌ ಶೆಟ್ಟರ್

ಮತ್ತೆ ಬಿಜೆಪಿಗೆ ಸೇರಿದ ಜಗದೀಶ್‌ ಶೆಟ್ಟರ್

0

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಉತ್ತರ ಕರ್ನಾಟಕದ ಹಿರಿಯ ಲಿಂಗಾಯತ ರಾಜಕಾರಣಿ ಜಗದೀಶ್ ಶೆಟ್ಟರ್ ಅವರು ಇಂದು ಗುರುವಾರ ಕಾಂಗ್ರೆಸ್ ತೊರೆದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತುಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ದೆಹಲಿಗೆ ತೆರಳಿರುವ ಶೆಟ್ಟರ್, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಇಂದು ವಾಪಸ್ ಮರಳಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೇಟ್‌ ಸಿಗದ ಹಿನ್ನೆಲೆಯಲ್ಲಿ ಶೆಟ್ಟರ್‌ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಮಲ ಪಕ್ಷವನ್ನು ತೊರೆದು ಶೆಟ್ಟರ್ ಕಾಂಗ್ರೆಸ್ ಸೇರಿದ್ದರು. ಅದೇ ಚುನಾವಣೆಯಲ್ಲಿ ಶೆಟ್ಟರ್ ಸ್ಪರ್ಧಿಸಿ ಸೋಲು ಕಂಡಿದ್ದರು. ಆನಂತರದಲ್ಲಿ ಕಾಂಗ್ರೆಸ್‌ ಅವರನ್ನು ಕರ್ನಾಟಕದ ವಿಧಾನ ಪರಿಷತ್ತಿನ ಸದಸ್ಯರಾಗಿ ಮಾಡಿತ್ತು.

ಈ ತಿಂಗಳ ಆರಂಭದಲ್ಲಿ, ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳನ್ನು ಸ್ವತಃ ಶೆಟ್ಟರ್‌ ಅವರೇ ನಿರಾಕರಿಸಿದ್ದರು. ಜಗದೀಶ್ ಶೆಟ್ಟರ್ ಅವರು ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ ಉಪಸ್ಥಿತರಿದ್ದರು.

ಬೆಳಗ್ಗೆ ಮೊದಲು ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿರುವ ಶೆಟ್ಟರ್. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

You cannot copy content of this page

Exit mobile version