Tuesday, October 8, 2024

ಸತ್ಯ | ನ್ಯಾಯ |ಧರ್ಮ

ಹರಿಯಾಣ, ಜಮ್ಮು-ಕಾಶ್ಮೀರದಲ್ಲಿ ಆಪ್ ಗೆ ಶಾಕ್: ಖಾತೆ ತೆರೆಯದ ದೆಹಲಿ ಪಕ್ಷ

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಹರಿಯಾಣ ಚುನಾವಣಾ ಫಲಿತಾಂಶದ ಕುತೂಹಲ ಮುಂದುವರೆದಿದೆ.

ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಸಿ ಮತ್ತು ಕಾಂಗ್ರೆಸ್ ಮೈತ್ರಿ ಮುಂದುವರಿದಿದೆ. ಪ್ರಸ್ತುತ ಟ್ರೆಂಡ್‌ ಪ್ರಕಾರ, ಮೈತ್ರಿ ಮ್ಯಾಜಿಕ್ ಫಿಗರ್ ಹಾದುಹೋಗಿದೆ.

ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ತೀವ್ರ ಹಿನ್ನಡೆ ಅನುಭವಿಸಿದೆ. ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೆಹಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಆದರೆ, ಉಭಯ ರಾಜ್ಯಗಳಲ್ಲಿ ಸ್ಪರ್ಧಿಸಿರುವ ಯಾವುದೇ ಸ್ಥಾನಗಳಲ್ಲಿ ಖಾತೆ ತೆರೆದಿಲ್ಲ ಎಂಬುದು ಗಮನಾರ್ಹ. ಕೇಜ್ರಿವಾಲ್‌ ಸಾರಥ್ಯದ ಪಕ್ಷಕ್ಕೆ ಈ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರಲು ಸಾಧ್ಯವಾಗಲಿಲ್ಲ.

ಹರಿಯಾಣದಲ್ಲಿ ಸಂಭ್ರಮ

ಹರಿಯಾಣ ಚುನಾವಣಾ ಮತ ಎಣಿಕೆಯಲ್ಲಿ ರೋಚಕತೆ ಮುಂದುವರೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಫಲಿತಾಂಶದ ಮಾದರಿಯು ಕ್ಷಣದಿಂದ ಕ್ಷಣಕ್ಕೆ ಬದಲಾಗುತ್ತಿದೆ. ಇಲ್ಲಿ ಎಕ್ಸಿಟ್ ಪೋಲ್ ಭವಿಷ್ಯ ವ್ಯತಿರಿಕ್ತವಾದಂತಿದೆ. ಮೊದಲಿಗೆ ಕಾಂಗ್ರೆಸ್ ಮುನ್ನಡೆಯಲ್ಲಿತ್ತು, ನಂತರ ಬಿಜೆಪಿ ಕ್ರಮೇಣ ಚೇತರಿಸಿಕೊಂಡಿತು. 90 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಮ್ಯಾಜಿಕ್ ಫಿಗರ್ ಮೀರಿ ಮುನ್ನಡೆ ಸಾಧಿಸುತ್ತಿದೆ. ಬಿಜೆಪಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ

ಇದೇ ವೇಳೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿ ಪ್ರವರ್ಧಮಾನಕ್ಕೆ ಬಂದಿದೆ. ಮ್ಯಾಜಿಕ್ ಫಿಗರ್ ಮೀರಿ ಅತಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. ಒಟ್ಟು 90 ಸ್ಥಾನಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪಿಡಿಪಿ ನಾಲ್ಕು ಸ್ಥಾನಗಳಲ್ಲಿ ಮತ್ತು ಇತರರು ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page