ʼಜನಸ್ಪಂದನʼ ಯಶಸ್ಸಿಗೆ ಕಾಂಗ್ರೆಸ್‌ ದಿಕ್ಕೆಟ್ಟಿದೆ: ಬಿಜೆಪಿ

ಬೆಂಗಳೂರು: ರಾಜ್ಯ ಸರ್ಕಾರವು ಮೂರು ವರ್ಷದ ಸಾಧನೆಯ ಕುರಿತು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ʼಜನಸ್ಪಂದನೆʼ ಸಮಾವೇಶವು ಅಭೂತಪೂರ್ವ ಯಶಸ್ಸನ್ನು ಕಂಡು ಕಾಂಗ್ರೆಸ್‌ ಕಂಗಾಲಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್‌ ಮಾಡಿದೆ.

ಜನ ಸ್ಪಂದನ ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್‌ ದಿಕ್ಕೆಟ್ಟಿದೆ. ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್‌ ನಾಯಕರ ನಿದ್ದೆಗೆಡಿಸಿದೆ. ಜನರು ಬಿಜೆಪಿ ಪಕ್ಷದ ಜೊತೆಗೆ ಇದ್ದಾರೆ ಎನ್ನುವುದು ರಾಜ್ಯದಲ್ಲಿ ನಡೆದ ಮೋದಿ ಕಾರ್ಯಕ್ರಮ ಮತ್ತು ಜನಸ್ಪಂದನ ಸಮಾವೇಶವೇ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು