Home ದೆಹಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಂಗೀಕಾರ: ಜಯಾ ಬಚ್ಚನ್ ಮತ್ತು ಪ್ರತಿಪಕ್ಷಗಳಿಂದ ತೀವ್ರ ವಿರೋಧ

ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಂಗೀಕಾರ: ಜಯಾ ಬಚ್ಚನ್ ಮತ್ತು ಪ್ರತಿಪಕ್ಷಗಳಿಂದ ತೀವ್ರ ವಿರೋಧ

0

ರಾಜ್ಯಸಭೆಯಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆ-2026’ ಅಂಗೀಕಾರಗೊಂಡಿದೆ. ಈ ಮಸೂದೆಯನ್ನು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು ತೀವ್ರವಾಗಿ ವಿರೋಧಿಸಿದ್ದಾರೆ. ರಾಜ್ಯಸಭೆಯಲ್ಲಿ ಮಸೂದೆಯ ಮೇಲೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಆಡಳಿತ ಪಕ್ಷದ ಸಂಸದರು ಅಡ್ಡಿಪಡಿಸಿದಾಗ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ತಂದಿರುವ ಈ ಹೊಸ ಮಸೂದೆಯು ಅಶಾಸ್ತ್ರೀಯವಾಗಿದ್ದು, ಟ್ರಾನ್ಸ್‌ಜೆಂಡರ್‌ ಸಮುದಾಯದ ಆತ್ಮಗೌರವಕ್ಕೆ ಧಕ್ಕೆ ತರುವಂತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಶೇಷವಾಗಿ, ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ತಮ್ಮ ಗುರುತನ್ನು ಸಾಬೀತುಪಡಿಸಲು ವೈದ್ಯಕೀಯ ಮಂಡಳಿಯಿಂದ ಪ್ರಮಾಣಪತ್ರ ಪಡೆಯಬೇಕು ಎಂಬ ನಿಬಂಧನೆಯನ್ನು ಜಯಾ ಬಚ್ಚನ್ ಅವರು ಕಟುವಾಗಿ ಟೀಕಿಸಿದ್ದಾರೆ.

ಟ್ರಾನ್ಸ್‌ಜೆಂಡರ್‌ ಸಮುದಾಯದ ಸಮಸ್ಯೆಗಳಿಗೆ ನೈಜ ಪರಿಹಾರ ಸಿಗಬೇಕಾದರೆ ಅವರ ಸಮುದಾಯಕ್ಕೆ ಸೇರಿದ ಒಬ್ಬರನ್ನು ಸಂಸತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

You cannot copy content of this page

Exit mobile version