ಬೆಂಗಳೂರು, ಜನವರಿ 29: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸೇರಿದ ಆಸ್ತಿ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಲಯ ಬುಧವಾರ ಪ್ರಮುಖ ಆದೇಶವೊಂದನ್ನು ಹೊರಡಿಸಿದೆ.
ಜಯಲಲಿತಾ ಅವರ ಮುಟ್ಟುಗೋಲು ಹಾಕಿಕೊಂಡಿರುವ ಎಲ್ಲಾ ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ವರ್ಗಾಯಿಸುವಂತೆ ಅದು ಆದೇಶ ಹೊರಡಿಸಿದೆ.
ಜಯಲಲಿತಾ ಅವರ ಸೊಸೆ ದೀಪಾ ಮತ್ತು ಸೋದರಳಿಯ ದೀಪಕ್ ಅವರು ಕಾನೂನುಬದ್ಧ ಉತ್ತರಾಧಿಕಾರಿಗಳು ಎಂದು ಹೇಳಿಕೊಂಡು ಸಲ್ಲಿಸಿದ್ದ ಅರ್ಜಿಗಳನ್ನು ಜನವರಿ 13 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ನಂತರ ವಿಶೇಷ ಸಿಬಿಐ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರನ್ನು ಸಿಬಿಐ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. 2016 ರಲ್ಲಿ ಜಯಲಲಿತಾ ಅವರ ಮರಣದ ನಂತರ ಪ್ರಕರಣದ ವಿಚಾರಣೆಯಲ್ಲಿ ವಿಳಂಬವಾದರೂ, ಸುಪ್ರೀಂ ಕೋರ್ಟ್ ಕೂಡ ಜಯಲಲಿತಾ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಎತ್ತಿಹಿಡಿದಿದೆ.