Friday, April 26, 2024

ಸತ್ಯ | ನ್ಯಾಯ |ಧರ್ಮ

ಉಡುಪಿ: ಬಿಜೆಪಿ ಟಿಕೆಟ್ ಗೊಂದಲದ ನಡುವೆ ಇಂದು ಕಾಂಗ್ರೆಸ್‌ ಸೇರಲಿರುವ ಕೆ ಜಯಪ್ರಕಾಶ್ ಹೆಗ್ಡೆ

ಮಾಜಿ ಸಂಸದರು ಹಾಗೂ ಮಾಜಿ ಸಚಿವ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಸೇರ್ಪಡೆ ಕೊನೆಗೂ ಖಚಿತಗೊಂಡಿದೆ

ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆ ಪಿ ಸಿ ಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರ್ಗಿಯಲ್ಲಿ ಜನಿಸಿದ ಜಯಪ್ರಕಾಶ್ ಹೆಗ್ಡೆ ಅವರು ವಕೀಲರಾಗಿದ್ದು, ತಮ್ಮ ಜೀವನದ ಆರಂಭದಲ್ಲಿಯೇ ರಾಜಕೀಯ ಪ್ರವೇಶಿಸಿದ ಅವರು ಅಂದಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಜನತಾದಳ ಸರಕಾರದಲ್ಲಿ ಬಂದರು ಮತ್ತು ಮೀನುಗಾರಿಕೆ ಖಾತೆಯನ್ನು ಹೊಂದಿರುವ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ವಿಧಾನಪರಿಷತ್ ಚುನಾವಣೆ ವೇಳೆ ಟಿಕೇಟ್ ಹಂಚಿಕೆ ವಿಚಾರದಲ್ಲಿ ಹೆಗ್ಡೆಯವರನ್ನು ಪಕ್ಷ ಉಚ್ಚಾಟನೆ ಮಾಡಿದ್ದು ಭಾರತೀಯ ಜನತಾಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಆ ವೇಳೆಯಲ್ಲಿ ಅವರಿಗೆ ಈ ಹಿಂದಿನ ಬಿಜೆಪಿ ಸರ್ಕಾರ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿತ್ತು.

ಭಾರೀ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಕೆ ಮಾಡಿದ ಬಳಿಕಅವರು ಕಾಂಗ್ರೆಸ್ ಗೆ ಮರಳಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಕಳೆದೊಂದು ವರ್ಷದಿಂದಲೂ ವದಂತಿಯಿತ್ತು. ಸದ್ಯ ಮಂಗಳವಾರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿರುವ ಜೆಪಿ ಹೆಗ್ಡೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯಡರ್ಥಿಯಾಗುವುದು ಬಹುತೇಕ ಖಚಿತವಾದಂತಾಗಿದೆ.

ಬಿಜೆಪಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್‌ ಕಗ್ಗಂಟು ಎಂದಿನಂತೆ ಮುಂದುವರೆದಿದ್ದು ಶೋಭಾ ಕರಂದ್ಲಾಜೆ ಹಾಗೂ ಸಿಟಿ ರವಿ ನಡುವಿನ ಕೆಸರು ಎರಚಾಟ ತಾರಕಕ್ಕೆ ತಲುಪಿರುವುದರ ನಡುವೆ ಬಿಜೆಪಿ ನಾಯಕನೂ ಪಕ್ಷ ತೊರೆದಿರುವುದು ಬಿಜೆಪಿ ಇಕ್ಕಟ್ಟಿನ ಪರಿಸ್ಥಿತಿಯನ್ನು ಸೃಷ್ಟಿಸಿದೆ.

Related Articles

ಇತ್ತೀಚಿನ ಸುದ್ದಿಗಳು