Friday, June 14, 2024

ಸತ್ಯ | ನ್ಯಾಯ |ಧರ್ಮ

ಅತ್ಯಾ*ಚಾರ ಆರೋಪಿಯನ್ನು “ಮಾಸ್ *ಪಿಸ್ಟ್” ಎಂದ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು

ಇಡೀ ರಾಜ್ಯವೇ ತಲೆ ತಗ್ಗಿಸುವ, ಅತಿ ದೊಡ್ಡ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೀಡಿದ ಹೇಳಿಕೆ ವಿರುದ್ಧವಾಗಿ ಜೆಡಿಎಸ್ ಪಕ್ಷ ಈಗ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದೆ‌.

ಬಹಿರಂಗ ಸಭೆಗಳ ಭಾಷಣಗಳಲ್ಲಿ ಪ್ರಜ್ವಲ್ ರೇವಣ್ಣನನ್ನು ಅವಹೇಳನ ಮಾಡಿದ ರಾಹುಲ್ ಗಾಂಧಿಯವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜೆಡಿಎಸ್ ಪಕ್ಷ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರನ್ನು ನೀಡಿದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು. ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಮಂಜೇಗೌಡ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ನಗರದ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್ ಅವರಿದ್ದ ನಿಯೋಗ ಬುಧವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದರು.

ಜೆಡಿಎಸ್ ನಾಯಕ ಹೆಚ್.ಎಂ.ರಮೇಶ್ ಗೌಡ ಸಹಿ ಹಾಕಿರುವ ದೂರಿನಲ್ಲಿ ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ, “ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ” ಎಂದು ಇದೇ ಮೇ 2ರಂದು ಹೇಳಿಕೆ ನೀಡಿದ್ದರು.

ನೊಂದ ಮಹಿಳೆಯರ ನ್ಯಾಯ ಕೊಡಿಸುವುದನ್ನು ಕಡೆಗಣಿಸಿ ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ. ನಾನೂರು ಮಹಿಳೆಯರ ಮೇಲೆ ಮಾಸ್ ರೇಪ್ ಆಗಿರುವ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಎಲ್ಲಾ ಮಾಹಿತಿ ಇದೆ ಹಾಗೂ ಅತ್ಯಾಚಾರಕ್ಕೆ ತುತ್ತಾದ ಅಷ್ಟೂ ಮಹಿಳೆಯರ ಮಾಹಿತಿ ಅವರಲ್ಲಿ ಇದೆ ಎನ್ನುವುದು ಅವರದೇ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಲ್ಲಿ ಜೆಡಿಎಸ್ ಪಕ್ಷ ಒತ್ತಾಯ ಮಾಡಿದೆ.

ನಾನೂರು ಮಹಿಳೆಯರು ಎಂದು ತಪ್ಪು ಮಾಹಿತಿ, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತೆ ಮಾಡಿದ ಅವರ ವಿರುದ್ಧ ಕೂಡಲೇ ಸೆಕ್ಷನ್ 202, 1860ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಜೆಡಿಎಸ್ ಆಗ್ರಹಪಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು