ಬೆಂಗಳೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕರಾದ ಕೆ.ಪಿ. ಬಚ್ಚೇಗೌಡ ಅವರು ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಈ ಹಿಂದೆ 2013 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈಗ ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿಯಲ್ಲಿ ತಮನ್ನು ಪರಿಗಣಿಸುತ್ತಿಲ್ಲ ಎಂಬುದಾಗಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗೆ ಜೆಡಿಎಸ್ ನಾಯಕರು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಹೊತ್ತಿನಲ್ಲೇ ಮತ್ತೊಬ್ಬ ನಾಯಕ ಪಕ್ಷ ತೊರೆದಿರುವುದು ಜೆಡಿಎಸ್ ಗೆ ಪೆಟ್ಟು ಬಿದ್ದಂತಾಗಿದೆ.